ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಾಳೆ ಅವರು ಇಂದು(ಅಕ್ಟೋಬರ್‌ 15) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಮಾಣ ವಚನ ಬೋಧಿಸಿದರು.

ರಾಜಭವನದ ಗಾಜಿನ‌ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪಿ ಬಿ ವರಾಳೆ ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌, ಬಿ ವೀರಪ್ಪ, ಆರ್‌ ದೇವದಾಸ್‌, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ, ನ್ಯಾಯಾಂಗದ ಅಧಿಕಾರಿಗಳು, ಕುಟುಂಬದವರು  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಳೆದ ತಿಂಗಳು ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾ. ವರಾಳೆ ಅವರ ಪದೋನ್ನತಿಗೆ ಶಿಫಾರಸ್ಸು ಮಾಡಿದ್ದರು.

ಪಿ ಬಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಕ್ರಿಮಿನಲ್ ಮತ್ತು ಸಿವಿಲ್ ಎರಡೂ ಕೇಸುಗಳನ್ನು ನಡೆಸಿಕೊಂಡು ಹೋಗುತ್ತಿದ್ದರು. ಅಸಿಸ್ಟೆಂಟ್ ಗೌರ್ನಮೆಂಟ್ ಪ್ಲೀಡರ್ ಮತ್ತು ಅಡಿಷನಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠದಲ್ಲಿ ಸರ್ಕಾರ ಪರವಾಗಿ ಎಎನ್ ಡಿ ಅಡಿಷನಲ್ ಸ್ಟ್ಯಾಂಡಿಂಗ್ ಕೌನ್ಸೆಲ್ ಆಗಿದ್ದರು. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಜುಲೈ 18, 2008 ರಂದು ನೇಮಕಗೊಂಡಿದ್ದರು.

Donate Janashakthi Media

Leave a Reply

Your email address will not be published. Required fields are marked *