ಎಫ್.ಡಿ.ಎ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು ವಾಣಿಜ್ಯ ತೆರಿಗೆ ಇನ್ಸಪೆಕ್ಟರ್

ಬೆಂಗಳೂರು ಜ 24: ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ವಾಣಿಜ್ಯ ತೆರಿಗೆ ಇಲಾಖೆ ಇನ್‌ಸ್ಪೆಕ್ಟರ್‌ ಜಿ.ಎಸ್.ಚಂದ್ರು ಹಾಗೂ ಸಹಚರರು, ಹಲವು ತಿಂಗಳಿನಿಂದ ತಯಾರಿ ಮಾಡಿಕೊಂಡಿದ್ದರು ಎಂಬ ಸಂಗತಿ ಸಿಸಿಬಿ ತನಿಖೆಯಿಂದ ಬಯಲಾಗಿದೆ. ಈ ಪ್ರಕರಣ ಹಿಂದಿನ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲವನ್ನು ಪತ್ತೆ ಹಚ್ಚುವ ಸಾಧ್ಯತೆಗಳು ಕೂಡಾ ಇವೆ.

ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿಯ ಉಪಕಾರ್‌ ಲೇಔಟ್‌ನಲ್ಲಿರುವ ಚಂದ್ರಪ್ಪ ಮನೆ ಮೇಲೆ ಶನಿವಾರ ದಾಳಿ ಮಾಡಿರುವ ಸಿಸಿಬಿ ಪೊಲೀಸರು, ಅದೇ ಮನೆಯಲ್ಲೇ ಪ್ರಶ್ನೆಪತ್ರಿಕೆಗಳನ್ನು ಜಪ್ತಿ ಮಾಡಿದ್ದಾರೆ. ಚಂದ್ರು ಅಲಿಯಾಸ್ ಚಂದ್ರಪ್ಪ, ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ರಾಚಪ್ಪ, ಮಹೇಶ್‌ ಹಾಗೂ ಮೂವರು ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ.

‘ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇನ್‌ಸ್ಪೆಕ್ಟರ್ ಚಂದ್ರಪ್ಪ, ತನ್ನ ಸಹಚರರ ಜೊತೆ ಸೇರಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಸಂಚು ರೂಪಿಸಿದ್ದ.
ಮಧ್ಯವರ್ತಿಗಳ ಮೂಲಕ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ನೀಡುವ ಒಪ್ಪಂದ ಮಾಡಿಕೊಂಡು ಹಣ ಪಡೆದಿದ್ದ’ ಎಂದು ಸಿಸಿಬಿ ಮೂಲಗಳು ಹೇಳಿವೆ. ಮಧ್ಯವರ್ತಿಗಳಲ್ಲಿ KPSC ಸದಸ್ಯರು, ಅಧಿಕಾರಿಗಳು, ಪ್ರಭಾವಿ ರಾಜಕಾರಣಿಗಳು ಭಾಗಿಯಾಗರುವ ಸಾಧ್ಯತೆ ಇದೆ ಎಂದೆ ಶಂಕೆ ವ್ಯಕ್ತಪಡಿಸಲಾಗಿದೆ.

ಈ ಸುದ್ದಿಯನ್ನೂ ಓದಿ : ಪ್ರಶ್ನೆ ಪತ್ರಿಕೆ ಸೋರಿಕೆ : ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

‘ಶನಿವಾರವೇ ಆರೋಪಿ ಕೈಗೆ ಪ್ರಶ್ನೆಪತ್ರಿಕೆ ಸಿಕ್ಕಿತ್ತು. ಅದನ್ನೇ ಮನೆಗೆ ತಂದಿದ್ದ ಚಂದ್ರು, 10 ಲಕ್ಷ ರೂ ಹಣ ಪಡೆದು ಅಭ್ಯರ್ಥಿಗಳಿಗೆ ಕೊಟ್ಟಿದ್ದ. ಅದನ್ನು ಮುಂದಿಟ್ಟುಕೊಂಡು ಸರಿ ಉತ್ತರಗಳನ್ನು ಸಿದ್ಧಪಡಿಸಿದ್ದ ಅಭ್ಯರ್ಥಿಗಳು, ಭಾನುವಾರದ ಪರೀಕ್ಷೆಗೆ ಸಿದ್ಧರಾಗಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಮಾಹಿತಿ ಬರುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಲಾಯಿತು. ಪ್ರಶ್ನೆಪತ್ರಿಕೆ ಹಾಗೂ ಅಭ್ಯರ್ಥಿಗಳ ಜೊತೆ ಆರೋಪಿಗಳೂ ಸಿಕ್ಕಿಬಿದ್ದರು’ ಎಂದೂ ಸಿಸಿಬಿ ಮೂಲಗಳು ಹೇಳಿವೆ.

‘ಆರೋಪಿ ಚಂದ್ರಪ್ಪ, ಕೆಲ ಅಧಿಕಾರಿಗಳ ಜೊತೆ ಉತ್ತಮ ಒಡನಾಟ ಇಟ್ಟುಕೊಂಡಿದ್ದ. ಆತನೇ ಪ್ರಶ್ನೆಪತ್ರಿಕೆ ಸೋರಿಕೆ ರೂವಾರಿ ಎಂಬುದು ಸದ್ಯಕ್ಕೆ ಗೊತ್ತಾಗಿದೆ. ಇನ್ನಷ್ಟೂ ಮಾಹಿತಿಗಳು ತನಿಖೆಯಿಂದ ಹೊರಬರಲಿವೆ.

Donate Janashakthi Media

Leave a Reply

Your email address will not be published. Required fields are marked *