ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಲ್ಲಿದ್ದು,ಇದರ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.ಪ್ರತಾಪ್ ಸಿಂಹ
ಇದನ್ನೂ ಓದಿ:ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನ ಅಂತಿಮ: ಪ್ರತಾಪ್ ಸಿಂಹ
ಭಾನುವಾರ ಸೆ-10 ಆದಿಚುಂಚನಗಿರಿ ಶಾಖಾ ಮಠಕ್ಕೆ ದೇವೇಗೌಡರು ಭೇಟಿ ನೀಡಿದ ವೇಳೆ ಪ್ರತಾಪ್ ಸಿಂಹ ಭೇಟಿಯಾಗಿದ್ದು, ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿದ ಪ್ರತಾಪ್ ಸಿಂಹ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶ್ರೀಗಳು, ಜಿ.ಟಿ. ದೇವೇಗೌಡ ಇದ್ದರು.
ಮೈಸೂರು, ಕೊಡಗು ಕ್ಷೇತ್ರದಲ್ಲಿ ಒಕ್ಕಲಿಗರು ಪ್ರಾಬಲ್ಯ ಹೊಂದಿದ್ದು, ಈಗಿನಿಂದಲೇ ಜೆಡಿಎಸ್ ಮತ ಬ್ಯಾಂಕ್ ಗೆ ಪ್ರತಾಪ್ ಸಿಂಹ ಕೈ ಹಾಕಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು. ಜೆಡಿಎಸ್ ನಾಯಕರೊಂದಿಗೆ ಪ್ರತಾಪ್ ಸಿಂಹ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮೈಸೂರು ಭಾಗದ ಜೆಡಿಎಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿಗೆ ರಣತಂತ್ರ ಹೆಣೆಯುತ್ತಿದ್ದಾರೆ.
ಪ್ರತಾಪ್ ಸಿಂಹ