ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು .ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅತ್ಯಂತ ಮಹತ್ವದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು. ಕ್ರಿಯಾ 

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಅಲ್ಲದೇ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು. ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು. ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು. ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಲಾಯಿತು.

ಇದನ್ನು ಓದಿ : ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಟೆಂಟ್ ಅಥವಾ ಶಾಮಿಯಾನ ಹಾಕಿ ಪೊಲೀಸ್ ಠಾಣೆ ಮುಚ್ಚುವುದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶಗಳೂ ಇಲ್ಲ

ಅಲ್ಲದೇ ಸಭೆಯಲ್ಲಿ ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ತೀರ್ಮಾನಿಸಲಾಯಿತು. ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕ್ರಿಯಾ 

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದ್ದು, ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆಧ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ, ರಹೀಂ ಖಾನ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪೂರ, ಎನ್. ಎಸ್. ಭೋಸರಾಜು, ಶಿವರಾಜ್ ತಂಗಡಗಿ, ಡಿ.ಸುಧಾಕರ್, ಕೆ.ಕೆ. ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನು ನೋಡಿ : ನೀಟ್ “ಕಾಸಿದ್ದವರ ಮೆಡಿಕಲ್ “ಮೀಸಲಾತಿಯೆ? ನೀಟಾಗದ ಪರೀಕ್ಷೆಯ ಹೊಣೆ ಹೊರುವುದೆ ಕೇಂದ್ರ ಸರ್ಕಾರ? J#neet2024

Donate Janashakthi Media

Leave a Reply

Your email address will not be published. Required fields are marked *