ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ ಪ್ರತಿಮೆ ಮಂಗಳವಾರ ಅನಾವರಣಗೊಂಡಿತು.
ಮಧ್ಯಾಹ್ನ 12ಕ್ಕೆ ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರತಿಮೆ ಅನಾವರಣಗೊಳಿಸಿದರು. ಜನರಿಗೆ ಬಾಪೂಜಿ ದರ್ಶನವಾಗುತ್ತಿದ್ದಂತೆ, ಬಣ್ಣ-ಬಣ್ಣದ ಸಿಡಿಮದ್ದುಗಳನ್ನು ಹಾರಿಸಿ ಸಂಭ್ರಮಿಸಲಾಯಿತು. ಇದೇ ವೇಳೆ, ಗದುಗಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಲಾಂಛನ ಬಿಡುಗಡೆಗೊಳಿಸಲಾಯಿತು.
ಇದನ್ನೂ ಓದಿ: “ಕೃಷಿ ಮಾರುಕಟ್ಟೆ ಕುರಿತ ಕರಡು ರಾಷ್ಟ್ರೀಯ ನೀತಿ ಚೌಕಟ್ಟು”: ಕರಾಳ ಕೃಷಿ ಕಾಯ್ದೆಗಳ ಅಂಶಗಳನ್ನು ಮರಳಿ ತರುವ ಪ್ರಯತ್ನ
ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸತೀಶ ಜಾರಕಿಹೊಳಿ, ಜಿ.ಪರಮೇಶ್ವರ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇತರರಿದ್ದರು. ಅಧಿವೇಶನದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಸ್ವಾಗತಿಸಿದರು.
ಇದನ್ನೂ ನೋಡಿ: ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 | ಸೌಹಾರ್ದ ಜಾಥಾ – ಬಹಿರಂಗ ಸಭೆ