ಈ ಪತ್ರದಲ್ಲಿ ನಿರ್ದಿಷ್ಟ ಪ್ರಕರಣದ ನಿದರ್ಶನ ಉಲ್ಲೇಖಿಸಿಲ್ಲ. ಆದರೆ, ಇತ್ತೀಚೆಗೆ ನ್ಯೂಸ್‌ಕ್ಲಿಕ್ ಸಂಸ್ಥಾಪಕ-ಸಂಪಾದಕ ಪ್ರಬೀರ್ ಪುರಕಾಯಸ್ಥ ಮತ್ತು ಆ ಸಂಸ್ಥೆಯ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಯುಎಪಿಎ ಅಡಿಯಲ್ಲಿ ಬಂಧಿಸಿ, 44 ಇತರ ಪತ್ರಕರ್ತರಿಗೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಕ್ಕಾಗಿ ಈ ಪತ್ರ ಬರೆಯಲಾಗಿದೆ ಎಂದು ಮಾಧ್ಯಮ ಸಂಘಟನೆಗಳು ತಿಳಿಸಿವೆ.
ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಪ್ರೆಸ್ ಅಸೋಸಿಯೇಷನ್, ಇಂಡಿಯನ್ ವುಮೆನ್ ಪ್ರೆಸ್ ಕಾಪ್ಸ್, ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್, ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್, ಡಿಜಿಪಬ್, ಫಾರಿನ್ ಕರೆಸ್ಪಾಂಡೆಂಟ್ ಕ್ಲಬ್, ವೆಟರನ್ ಜರ್ನಲಿಸ್ಟ್ ಗ್ರೂಪ್ ಮತ್ತು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ಈ ಪತ್ರಕ್ಕೆ ಸಹಿ ಮಾಡಿವೆ.