ಬೆಂಗಳೂರು: ರಾಜ್ಯ ಸರಕಾರವು ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯುವ ನಿರ್ಧಾರಕ್ಕೆ ಬಂದಿದೆ. ಈ ಮೂಲಕ ಕೇಂದ್ರ ಸರಕಾರದ ಮೇಲೆ ಒತ್ತಡ ತಂತ್ರ ಅನುಸರಿಸಲು ರಾಜ್ಯ ಸರಕಾರ ಮುಂದಾಗಿದೆ. ಬೆಂಗಳೂರು
ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗೆಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತು 2011ರ ಸೆ. 16ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವುದಕ್ಕೆ ರಾಜ್ಯ ಸರಕಾರ ನಿರ್ಧರಿಸಿದೆ.
ಇದನ್ನೂ ಓದಿ: ಉಳುವ ಬಡ ರೈತನನ್ನೇ ಭೂ ಒಡೆಯನನ್ನಾಗಿಸಿದ: ಟಿಪ್ಪು ಸುಲ್ತಾನ್
ಕೃಷ್ಣಾ ನ್ಯಾಯಾಧಿಕರಣ- ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ, ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರಕಾರ ಬದ್ಧವಾಗಿದೆ. ಈ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ನೋಡಿ: ಪಹಲ್ಗಾಮ ಹತ್ಯೆಯ ದುರಂತದ ಮಧ್ಯೆ ಕೇಂದ್ರದ ಜಾತಿ ಗಣತಿ ಘೋಷಣೆಯ ಹಿಂದಿನ ರಾಜಕೀಯ ಹಿತಾಸಕ್ತಿಯೇನು?