ಅರಣ್ಯ ಪ್ರದೇಶದ ವಿಸ್ತರಣೆಯಾದಾಗ ಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಭೂ ಪ್ರದೇಶದಲ್ಲಿ ಶೇ. 20 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ. 33 ಕ್ಕೆ ಅರಣ್ಯ ಪ್ರದೇಶದ ವಿಸ್ತರಣೆಯಾಗಬೇಕಿದೆ. ಆಗಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಹವಾಮಾನ 

ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಸಿದ್ದರಾಮಯ್ಯ ಅವರು ಮಾತನಾಡಿದರು.

ಈ ವರ್ಷ ಮಳೆಯಿಲ್ಲದೇ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ.40 ಲಕ್ಷ ಹೆಕ್ಟೇರನಲ್ಲಿ ಬೆಳೆದ ಶೇ 50ರಷ್ಟು ಬೆಳೆ ಹಾನಿಯಾಗಿದೆ. ಅರಣ್ಯ ಪ್ರದೇಶದ ಹೆಚ್ಚಳವೇ ಇದಕ್ಕೆಲ್ಲ ಪರಿಹಾರ ಎಂದರು. ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಸ್ಥೆಗಳು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಇದನ್ನೂ ಓದಿ: ಹಸಿರು ಕ್ರಾಂತಿಯ ರೂವಾರಿ, ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್‌ ನಿಧನ

ಕರ್ನಾಟಕವು ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ ಮತ್ತು ಹುಲಿಗಳ ಸಂಖ್ಯೆಯಲ್ಲಿ 2 ನೇ ಸ್ಥಾನದಲ್ಲಿದೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ. ಆದರೆ ಮನುಷ್ಯ-ಪ್ರಾಣಿ ಸಂಘರ್ಷಗಳು ಕೂಡ ಹೆಚ್ಚುತ್ತಿವೆ. ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು ಹೆಚ್ಚಿನ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಕಾಡು ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಅರಣ್ಯ ಪ್ರದೇಶದೊಳಗೆ ಲಭ್ಯವಾಗಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಹವಾಮಾನ

ಎರಡು ವರ್ಷಗಳಿಂದ ಪದಕ ವಿತರಣಾ ಸಮಾರಂಭ ನಡೆದಿಲ್ಲ.2020 ಹಾಗೂ 2021 ನೇ ಸಾಲಿನ ಪದಕ ವಿತರಣೆ ಮಾಡಲಾಗುತ್ತಿದೆ ಪ್ರತಿ ವರ್ಷ ಪದಕಗಳನ್ನು ನೀಡಬೇಕು. ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರು ಅತ್ಯಂತ ಕ್ಲಿಷ್ಟ ಪರಿಸ್ಥಿತಿ ಯಲ್ಲಿ ಕಾರ್ಯನಿರ್ವಹಿಸುತ್ತಾ ಅರಣ್ಯ ಸಂರಕ್ಷಣೆ ಮಾಡುತ್ತಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡುವುದಲ್ಲದೆ ಕಾಡು ಬೆಳೆಸುವ ಕೆಲಸವನ್ನೂ ಮಾಡುತ್ತಾರೆ. ಅಸಾಧಾರಣ ಸೇವೆ ಮಾಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಉತ್ತೇಜಿಸುವ ಕೆಲಸವನ್ನು ಮಾಡಬೇಕು ಎಂದರು. ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಬೇಕೆಂದು ಅರಣ್ಯ ಸಚಿವರಿಗೆ ಸಲಹೆ ನೀಡಿದರು.

ವಿಡಿಯೋ ನೋಡಿ: ಅಕ್ರಮವಾಗಿ ರೈತರ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿರುವ ನೈಸ್‌ ಕಂಪನಿವಿರುದ್ಧ ಗುಡುಗಿದ ರೈತರು Janashakthi Media

Donate Janashakthi Media

Leave a Reply

Your email address will not be published. Required fields are marked *