7ನೇ ಬಾರಿ ಮತ್ತೆ ದರ ಏರಿಕೆ; ಬೆಂಗಳೂರಿನಲ್ಲಿ ರೂ.105ಕ್ಕೆ ಪೆಟ್ರೋಲ್ ದರ…!

ನವದೆಹಲಿ: ಕಳೆದ ಎಂಟು ದಿನಗಳಲ್ಲಿ ಏಳನೇ ದಿನವಾದ ಇಂದು(ಮಾ.29) ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್‌ಗೆ 80 ಪೈಸೆ ಮತ್ತು ಡೀಸೆಲ್ 70 ಪೈಸೆ ಏರಿಕೆಯಾಗಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ 105 ರೂ ಗೆ ಏಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಮಾರ್ಚ್ 29ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿದೆ. ಈ ಪರಿಷ್ಕರಣೆಯ ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದೆ. ರಾಷ್ಟ್ರ ರಾಜಧಾನಿಯಲ್ಲಿ ಒಂದು ಲೀಟರ್ ಪೆಟ್ರೋಲ್  ಇದೀಗ ರೂ. 100.21 ಆಗಿದ್ದರೆ, ಡೀಸೆಲ್ ಲೀಟರ್‌ಗೆ ರೂ. 90.77 ರಿಂದ ರೂ. 91.47 ಕ್ಕೆ ಮಾರಾಟವಾಗುತ್ತಿದೆ.

ಇದನ್ನು ಓದಿ: ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕ ಇಳಿಸಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆರ್‌ಬಿಐ ಸೂಚನೆ

ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 115.04ಕ್ಕೆ ಏರಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ. 99.25 ಕ್ಕೆ ಮಾರಾಟವಾಗುತ್ತಿವೆ. ಮೆಟ್ರೋ ನಗರಗಳ ಪೈಕಿ  ಮುಂಬೈನಲ್ಲಿ ಇಂಧನ ದರಗಳು ಈಗಲೂ  ಹೆಚ್ಚಾಗಿದೆ. ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಾರಣದಿಂದಾಗಿ ರಾಜ್ಯಗಳಾದ್ಯಂತ ಬೆಲೆಗಳು ಬದಲಾಗುತ್ತವೆ.

ಮಾರ್ಚ್ 22ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರ ಹೆಚ್ಚಳವಾಗುತ್ತಿದೆ. ಎಂಟು ದಿನಗಳಲ್ಲಿ ಇದು ಏಳನೇ ಏರಿಕೆಯಾಗಿದ್ದು, ಇದರೊಂದಿಗೆ ಇದುವರೆಗೆ ಪೆಟ್ರೋಲ್ ಬೆಲೆ ಸುಮಾರು 4.90 ರೂ. ಏರಿಕೆಯಾಗಿದೆ.

ಸುಮಾರು 137 ದಿನಗಳ ನಂತರ ಅಂದರೆ, ಮಾರ್ಚ್‌ 22ರಂದು, ಪೆಟ್ರೋಲ್‌ ಹಾಗೂ ಡೀಸೆಲ್‌ ದರವನ್ನು ಏರಿಕೆ ಮಾಡಲಾಗಿದೆ. ಸತತ ಎರಡು ದಿನ ಏರಿಕೆ ಕಂಡಿದ್ದ ಪೆಟ್ರೋಲ್‌, ಡೀಸೆಲ್‌ ದರ ಮೂರನೇ ದಿನ ಸ್ಥಿರವಾಗಿತ್ತು. ಆದರೆ ಬಳಿಕ ನಿರಂತರವಾಗಿ ಏರಿಕೆ ಕಾಣುತ್ತಿದೆ.

ಇದನ್ನು ಓದಿ: 137 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರಗಳು

ತೈಲ ಬೆಲೆ ಏರಿಕೆ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ತೀವ್ರವಾಗಿ ಪ್ರಶ್ನೆ ಮಾಡುತ್ತಿದ್ದು, ಸೋಮವಾರ ರಾಜ್ಯಸಭೆಯಲ್ಲಿ, ಪೆಟ್ರೋಲ್ ಬೆಲೆ ಏರಿಕೆಯಿಂದ ಗಗನಕ್ಕೇರುತ್ತಿರುವ ಹಣದುಬ್ಬರ ವಿಷಯದ ಕುರಿತು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದವು.

ಅಗತ್ಯವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರನ್ನು ಕಾಡಿದೆ. ತೈಲ ಬೆಲೆ ಏರಿಕೆಯಿಂದ ಸಾರಿಗೆ ಸೇರಿದಂದ ವಿವಿಧ ವಯಯಗಳ ಮೇಲೆ ಭಾರಿ ಪರಿಣಾಮ ಬೀರಿದೆ. ವಿರೋಧ ಪಕ್ಷಗಳು ಕೇಂದ್ರದ ವಿರುದ್ಧ ತರಾಟೆಗೆ ತೆಗೆದುಕೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆಗಳು ಸಹ ನಡೆಯುತ್ತಿವೆ.

ಕಚ್ಚಾತೈಲದ ಬೆಲೆ

ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 111.3 ಯುಎಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ. ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

Donate Janashakthi Media

Leave a Reply

Your email address will not be published. Required fields are marked *