ನವದೆಹಲಿ: ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು ದೇಶದಲ್ಲಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಲ್ಲಿ ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್ ಹಂಚಿಕೊಂಡಿರುವ ಅವರು, ಕಚ್ಚಾ ತೈಲ ದರ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಇಂಧನದ ಮೇಲೆ ತೆರಿಗೆ ಹೆಚ್ಚಿಸಿ ಜನರ ಹಣವನ್ನು ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಕಿಡಿಕಾರಿದ್ದಾರೆ.
ಇದನ್ನು ಓದಿ : ರಾಹುಲ್ ಗಾಂಧಿ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನೆ ಶಾಸಕ
ಮೋದಿ ನೇತೃತ್ವದ ಸರ್ಕಾರದ ಇಂಧನ ಸೇರಿದಂತೆ ಇತರೆ ವಸ್ತುಗಳ ಮೇಲಿನ ದರ ಏರಿಕೆಯಿಂದ ಬೇಸತ್ತಿರುವ ಜನರು ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಅವರ ಆಡಳಿತವನ್ನು ತಿರಸ್ಕರಿಸಲಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಶೇ 32.5ರಷ್ಟು ಕಡಿಮೆಯಾಗಿದೆ. ಪ್ರಸ್ತುತ ಕಚ್ಚಾ ತೈಲ ದರದ ಪ್ರಕಾರ ಪೆಟ್ರೋಲ್ ₹48, ಡೀಸೆಲ್ ಬೆಲೆ ₹69 ಆಗಬೇಕು ಎಂದು ಖರ್ಗೆ ಮಾಹಿತಿ ನೀಡಿದ್ದಾರೆ.
ಇದನ್ನು ನೋಡಿ : ಪ್ರಜಾಪ್ರಭುತ್ವ ದಿನಾಚರಣೆ : ಯಾರಿಗೆ ಬಂತು? ಎಲ್ಲಿಗೆ ಬಂತು? | ವಾರದ ನೋಟ | ಶ್ರೀಪಾದ್ ಭಟ್ Janashakthi Media