ಬೆಂಗಳೂರು : ರಾಜ್ಯದಲ್ಲಿ ಗ್ರಾಹಕರಿಗೆ ಒಂದರ ಹಿಂದೊಂದರಂತೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಆಗಿ ಕೈ ಸುಡುತ್ತಿವೆ. ಇದೀಗ ಈರುಳ್ಳಿ ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ನಾಟಿ ಮತ್ತು ಹೈಬ್ರೀಡ್ ಬೆಳ್ಳುಳ್ಳಿ ಬೆಲೆ ಭಾರಿ ಹೆಚ್ಚಳ ಕಂಡಿದೆ. ಇದು ಬೆಲೆ ಏರಿಕೆಯ ಬಿಸಿಗೆ ತತ್ತರಿಸಿರುವ ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಬೆಳ್ಳುಳ್ಳಿ ಹಾಗೂ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಬೆಳ್ಳುಳ್ಳಿ ದರ ಕೆಜಿಗೆ 400 ರೂ. ಗಡಿ ದಾಟಿದ್ರೆ, ಈರುಳ್ಳಿ ದರ ಕೆಜಿಗೆ 80 ರೂ.ಗೆ ಮಾರಾಟವಾಗುತ್ತಿದೆ. ಮಧ್ಯಪ್ರದೇಶದಿಂದ ಆವಕ ಇಳಿಕೆಯಾಗಿರುವುದರಿಂದ ಬೆಳ್ಳುಳ್ಳಿ ಬೆಲೆ 400 ರ ಗಡಿ ದಾಟಿದೆ.
ಇದನ್ನು ಓದಿ : ಸಂತ್ರಸ್ತೆ ಅಪಹರಣ ಪ್ರಕರಣ: ಶಾಸಕ ರೇವಣ್ಣ ಜಾಮೀನು ಆದೇಶ ಎತ್ತಿ ಹಿಡಿದ ಹೈಕೋರ್ಟ್; ಆರು ಆರೋಪಿಗಳಿಗೂ ಜಾಮೀನು ಮಂಜೂರು
ರಾಜ್ಯದಲ್ಲಿ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದ್ದು, ಬೆಲೆ ಹೆಚ್ಚಳ ಕ್ಕಾಕೆರಣ ಎನ್ನಲಾಗಿದೆ. ಕೇಂದ್ರ ಸರ್ಕಾರ ದೇಶದ ರೈತರ ಹಿತ ದೃಷ್ಟಿಯಿಂದ ಬೆಳ್ಳುಳ್ಳಿ ಮೇಲಿನ ಆಮದು ಸುಂಕವನ್ನು 100ರಷ್ಟು ಹೆಚ್ಚಿಸಿದೆ.
ಈರುಳ್ಳಿ ದರ ಕೂಡ ಹೆಚ್ಚಳ ಕಂಡಿದ್ದು, ಭಾರಿ ಮಳೆಯಿಂದ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 52 ರೂ. ದಾಟಿದ್ದು, ಸೂಪರ್ ಮಾರ್ಕೆಟ್ ಗಳಲ್ಲಿ 80 ರೂ.ಗೆ ಮಾರಾಟ ಮಾಡಲಾಗುತ್ತಿದೆ.
ಇದನ್ನು ನೋಡಿ : ಆಗಸ್ಟ್ 31ರಂದು ರಾಜಭವನ ಚಲೋ – ಡಿಕೆ ಶಿವಕುಮಾರ್ Janashakthi Media