ಚಾಮರಾಜನಗರ : ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಅರ್ಚಕರ ಗುಂಪಿನಲ್ಲಿ ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಗಲಾಟೆ ನಡೆದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತ್ರಿಶೂಲ
ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ(65), ಶಿವಕುಮಾರಸ್ವಾಮಿ(40) ಹಾಗೂ ನಂಜುಂಡಸ್ವಾಮಿ(32) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇದನ್ನು ಓದಿ : ಕೆಎಸ್ಆರ್ಟಿಸಿ ಬಸ್ ನಿರ್ವಾಹಕ, ಪೇದೆಗಳಿಬ್ಬರು ಹೊಡೆದಾಟ; ವಿಡಿಯೋ ವೈರಲ್
ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ಪಡೆಯಲು ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದು, ದೀಕ್ಷೆ ಕೊಡಲು ಒಂದು ಗುಂಪು ದೇಗುಲದ ಹೊರಗೆ ತಯಾರಿ ಮಾಡಿಕೊಳ್ಳುವಾಗ ಈ ವೇಳೆ ಮತ್ತೊಂದು ಗುಂಪು ದೀಕ್ಷೆ ನಾವು ಕೊಡುತ್ತೇವೆ ಎಂದು ತಡೆ ಒಡ್ಡಿದೆ. ಆಗ ನಂಜುಂಡಸ್ವಾಮಿ ಮತ್ತು ಶಂಕರಪ್ಪನ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಈ ಘಟನೆ ಹೊಡೆದಾಟದ ಹಂತಕ್ಕೂ ಹೋಗಿದೆ.
ವಿಪರ್ಯಾಸ ಎಂದರೆ ಸಿದ್ದಪ್ಪಾಜಿ ಬೆತ್ತ ಮತ್ತು ತ್ರಿಶೂಲಗಳನ್ನು ಹಲ್ಲೆಗೆ ಆಯುಧವಾಗಿ ಬಳಸಿಕೊಂಡಿದ್ದು, ಶಂಕರಪ್ಪನ ತೊಡೆ ಮೂಳೆ ಮತ್ತು ಶಿವಕುಮಾರ್ ತಲೆಗೆ ಹಾಗೂ ಮತ್ತೊಂದು ಗುಂಪಿನ ನಂಜುಂಡಸ್ವಾಮಿಗೆ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನು ಈ ಘಟನೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಇದನ್ನು ನೋಡಿ : ಧ್ಯಾನ ಆರಂಭಿಸಿದ ನರೇಂದ್ರ ಮೋದಿ – ಕ್ಯಾಮರಾ ಕಣ್ಣಲ್ಲಿ ಮೋದಿ Janashakthi Media