ಮೋದಿಗೆ ಶಿಕ್ಷಣದ ಮಹತ್ವ ಅರ್ಥವಾಗುತ್ತಿಲ್ಲ : ಜೈಲಿನಿಂದಲೇ ಮನೀಶ್‌ ಸಿಸೋಡಿಯಾ ಬಹಿರಂಗ ಪತ್ರ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿಕ್ಷಣದ ಮಹತ್ವ ಅರ್ಥವಾಗುತ್ತಿಲ್ಲ ಎಂದು ಆರೋಪಿಸಿ ಎಎಪಿ ಮುಖಂಡ ಮನೀಶ್ ಸಿಸೋಡಿಯಾ ಬಹಿರಂಗ ಪತ್ರ ಬರೆದಿದ್ದಾರೆ.

ದೇಶದ ಜನತೆಯನ್ನು ಉದ್ದೇಶಿಸಿ ಜೈಲಿನಲ್ಲಿ ಪತ್ರ ಬರೆದಿರುವ ಅವರು ನರೇಂದ್ರ ಮೋದಿಗೆ ವಿಜ್ಞಾನ ಅರ್ಥವಾಗುತ್ತಿಲ್ಲ. ಶಿಕ್ಷಣದ ಮಹತ್ವ ತಿಳಿಯುತ್ತಿಲ್ಲ. ದೇಶದಲ್ಲಿ ಕಳೆದ ಕೆಲವು ವರ್ಷಗಳಲ್ಲಿ 60,000 ಶಾಲೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ.

ದೇಶದ ಪ್ರಗತಿಗೆ ಒಬ್ಬ ವಿದ್ಯಾವಂತ ಪ್ರಧಾನಿ ಇರುವುದು ಅಗತ್ಯ. ಪ್ರಧಾನಿ ಕಡಿಮೆ ವಿದ್ಯಾವಂತರಾಗಿದ್ದರೆ ಅದು ದೇಶಕ್ಕೆ ತುಂಬಾ ಅಪಾಯಕಾರಿ ಎಂದು ಸಿಸೋಡಿಯಾ ಅವರು ತಮ್ಮ ಪತ್ರಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣ : ಮನೀಶ್‌ ಸಿಸೋಡಿಯಾಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವಿಟರ್‌ನಲ್ಲಿ ಮನೀಶ್ ಸಿಸೋಡಿಯಾ ಬರೆದಿರುವ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು.

Donate Janashakthi Media

Leave a Reply

Your email address will not be published. Required fields are marked *