ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ – ಸಿದ್ದರಾಮಯ್ಯ ಆರೋಪ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಇವರ ಜತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನ ಆಗ್ತದೆ ಎನ್ಮುವುದು ಬರೀ ದೇವೇಗೌಡರ  ಭ್ರಮೆ‌. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ ಎಂದರು.

ಇದನ್ನೂ ಓದಿ: ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು

ಭ್ರಷ್ಟನಿಗೆ ಮತ ಕೇಳಲು ಮೋದಿ ಬರ್ತಾರೆ

ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ.  ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗ್ತದೆ ಎಂದು ಖಚಿತವಾಗಿ ನುಡಿದರು.

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.‌

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದರು.

ಇದನ್ನೂ ನೋಡಿ: ಅಂಬೇಡ್ಕರ್‌ ಓದು : ‘ಖೋತಿ’ ವ್ಯವಸ್ಥೆ ವಿರೋಧಿ ಹೋರಾಟ – ಎನ್‌ ನಾಗರಾಜ Janashakthi Media

Donate Janashakthi Media

Leave a Reply

Your email address will not be published. Required fields are marked *