ಬೆಂಗಳೂರು: ಉಡುಪಿಯ ನೇತ್ರ ಜ್ಯೋತಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿನ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎನ್ನುವ ಆರೋಪದ ಪ್ರಕರಣವನ್ನು ಸಿ.ಐ.ಡಿಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ | ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಘಟನೆಗೆ ಪುರಾವೆಯಿಲ್ಲ: ಎಸ್ಪಿ ಸ್ಪಷ್ಟನೆ
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ.
– ಮುಖ್ಯಮಂತ್ರಿ @siddaramaiah pic.twitter.com/3aVKquZYQ6— CM of Karnataka (@CMofKarnataka) August 7, 2023
ಮುಖ್ಯಮಂತ್ರಿ ಕಚೇರಿಯ ಅಧಿಕೃತ ಖಾತೆಯಿಂದ ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಮಾಹಿತಿ ನೀಡಲಾಗಿದೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಎಕ್ಸ್‌ನಲ್ಲಿ ಬರೆದುಕೊಂಡಿದೆ.