ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಆಗಸ್ಟ್-16 ಬುಧವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಬೆಂಗಳೂರಿನ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಿಎಸ್‌ಆರ್ (ಕಾರ್ಪೋರೇಟ್ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿ) ಅನುದಾನ ಕುರಿತು ಚರ್ಚಿಸಲಾಯಿತು.
ಇದನ್ನೂ ಓದಿ:ನಿಗಮ,ಮಂಡಳಿಗಳಲ್ಲಿ ಪಕ್ಷದ ಮುಖಂಡರಿಗೆ ಎರಡೂವರೆ ವರ್ಷ ಅಧಿಕಾರ ಹಂಚಿಕೆ:ಡಿ.ಕೆ.ಶಿವಕುಮಾರ್
ಸಭೆ ನಂತರ ಮಾತನಾಡಿದ ಅವರು, ಸಿಎಸ್‌ಆರ್ ಹಣದ ಮೂಲಕ ಸರ್ಕಾರಿ ಶಾಲೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಖಾಸಗಿ ಶಾಲೆಗಳು ಒಂದೊಂದು ಶಾಲೆಗಳನ್ನು ದತ್ತು ಪಡೆದುಕೊಳ್ಳಬೇಕು. ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ತರಲು ಮುಂದಾಗಿದ್ದೇವೆ. ಈ ಹೊಸ ಪರಿಕಲ್ಪನೆಯನ್ನು ಹೇಗೆ ಜಾರಿ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನು ಕೂಡ ಮೂರು ಶಾಲೆಗಳ ಶಾಲೆಗಳ ಮಾಲೀಕ. ಆದರಿಂದ ನಾನು ಕೂಡ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಳ್ಳುತ್ತೇನೆ ಎಂದರು.
ಈ ವೇಳೆ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಪ್ರತಿಪಕ್ಷಗಳು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ಯಾಕರ ನೀರು ಬಿಟ್ಟಿದ್ದೀರಿ ಎಂದು ನಮ್ಮನ್ನು ಪ್ರಶ್ನಿಸಲು ನಮ್ಮ ಬಳಿ ಡ್ಯಾಂನ ಬೀಗ ಇದೆಯಾ ಎಂದು ಮರು ಪ್ರಶ್ನೆ ಮಾಡಿದರು. ಕೆಆರ್‌ಎಸ್ ಬೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಇದೆ, ಕೇಂದ್ರ ಸರ್ಕಾರದ ಬಳಿ ಇದೆ ಎಂದರು.