ಬೆಂಗಳೂರು: ಖಾಸಗಿ ವಾಹನಗಳ ಮಾಲೀಕರು, ಚಾಲಕರ ಒಕ್ಕೂಟ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದೆ. ಆಟೋ, ಕ್ಯಾಬ್, ಟ್ಯಾಕ್ಸಿಗಳಿಲ್ಲದೇ ಜನರು ಪರದಾಡುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಖಾಸಗಿ ವಾಹನ ಸಂಚಾರ ಬಂದ್ ಆಗಿದೆ. ಬೆಂಗಳೂರಲ್ಲಿ ಖಾಸಗಿ ವಾಹನ ಡ್ರೈವರ್ಗಳು ಪಾದಯಾತ್ರೆ ಮಾಡುತ್ತಿದ್ದು, ಫ್ರೀಡಂಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಖಾಸಗಿ
ಇದನ್ನೂ ಓದಿ:ಖಾಸಗಿ ಸಾರಿಗೆ ಬಂದ್: ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ 4000 ಹೆಚ್ಚುವರಿ ಟ್ರಿಪ್
ಬೆಂಗಳೂರು ಬಂದ್ ಕರೆಕೊಟ್ಟು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆಟೋ, ಕ್ಯಾಬ್, ಟ್ಯಾಕ್ಸಿ ಮಾಲೀಕರು, ಚಾಲಕರು ಪ್ರೊಟೆಸ್ಟ್ ನಲ್ಲಿ ಭಾಗಿಯಾಗಿದ್ದು, 25ಕ್ಕೂ ಹೆಚ್ಚು ಬೇಡಿಕೆ ಈಡೇರಿಸುವಂತೆ ಆಗ್ರಹಿದ್ಧಾರೆ. ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಆಕ್ರೋಶ ವ್ಯಕ್ತಪಡಿಸುತ್ತಿದ್ದು, 32ಕ್ಕೂ ಹೆಚ್ಚು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕಾರ್ಪೋರೇಟ್ ಕಂಪೆನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿರುವ ಬಸ್‌ಗಳು ಕೂಡ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಬೆಂಗಳೂರಿನ 7 ದಿಕ್ಕುಗಳಿಂದ ಹೋರಾಟಗಾರರು ಬಂದಿದ್ಧಾರೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಜಮಾವಣೆ ಆಗಿದ್ಧಾರೆ.
ವಾಹನ ಚಾಲಕರು ಬೃಹತ್ ಪಾದಯಾತ್ರೆ ನಡೆಸುತ್ತಿದ್ಧಾರೆ. ಸಿಟಿ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಮೆರವಣಿಗೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ವಾಹನ ಚಾಲಕರು ಭಾಗವಹಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
- ಮಾಸಿಕ 10,000 ರೂ.ಪರಿಹಾರ ರೂಪದಲ್ಲಿ ಧನಸಹಾಯ ನೀಡಬೇಕು. ಆಟೋ, ಖಾಸಗಿ ವಾಹನ ಚಾಲಕರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡ್ಬೇಕು.
- ಖಾಸಗಿ ಬಸ್ಗಳನ್ನು ಬಾಡಿಗೆಗೆ ಪಡೆದು ಶಕ್ತಿ ಯೋಜನೆ ಅಳವಡಿಸಬೇಕು. ಅಕ್ರಮವಾಗಿ ಚಲಿಸುತ್ತಿರುವ ರಾಪಿಡೊ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಬೇಕು.
- ಎಲೆಕ್ನಿಕ್ ಆಟೊರಿಕ್ಷಾಗಳಿಗೆ ರಹದಾರಿ ನೀಡಬೇಕು.
- ರಾಪಿಡೊ, ಓಲಾ, ಉಬರ್, ಇನ್ನಿತರ ಆನ್ಲೈನ್ ಕಂಪನಿಗಳಿಗೆ ಇ-ರಿಕ್ಷಾಗಳ ನೇರ ನೋಂದಣಿ ಮಾಡುವುದನ್ನು ನಿಷೇಧಿಸಬೇಕು.
- ಬಿಳಿ ಫಲಕ ಹೊಂದಿರುವ ವಾಹನಗಳಲ್ಲಿ ಬಾಡಿಗೆ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು.
- ಓಲಾ, ಉಬರ್, ರೆಡ್ಸ್ ನಂತಹ ಆನ್ಲೈನ್ ಕಂಪನಿಗಳು ನಿಗದಿಯಾಗಿರುವ ಶೇ 5ಕ್ಕಿಂತ ಹೆಚ್ಚು ಕಮಿಷನ್ ಪಡೆಯದಂತೆ ನಿರ್ಬಂಧಿಸಬೇಕು.
- ವಿಮಾನ ನಿಲ್ದಾಣಕ್ಕೆ ಏಕರೂಪ ದರ ನಿರ್ಧರಿಸಬೇಕು.
- ವಾಹನಗಳಿಗೆ ಜೀವಿತಾವಧಿ ತೆರಿಗೆ ವಿಧಿಸುವುದನ್ನು ಕೈಬಿಡಬೇಕು. ಚಾಲಕರಿಗೆ ವಸತಿ, ಕಾರು ಖರೀದಿಗೆ ಸಬ್ಸಿಡಿ ನೀಡಬೇಕು.
- ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.
- ನೇರ ಸಾಲ ಸೌಲಭ್ಯ ಯೋಜನೆಯಡಿ 12 ಲಕ್ಷವರೆಗೆ ಸಾಲ ಒದಗಿಸಬೇಕು. ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ ಒದಗಿಸಬೇಕು.
- ಅಂತರ್ರಾಜ್ಯ ಪ್ರವಾಸಿ ವಾಹನಗಳ ಪರಸ್ಪರ ಒಪ್ಪಂದಕ್ಕೆ ಚಾಲನೆ ನೀಡಬೇಕು.
- ಸರ್ಕಾರಿ ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಪ್ರಯಾಣಿಕರನ್ನು ಒಯ್ಯಬಾರದು.
- ಖಾಸಗಿ ವಾಹನಗಳನ್ನು ಕಿಲೋಮೀಟರ್ ಆಧಾರದಲ್ಲಿ ಸರ್ಕಾರವೇ ಬಾಡಿಗೆ ಪಡೆಯಬೇಕು.
- ಟೂರಿಸ್ಟ್, ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಗಳಿಗೆ ರಸ್ತೆ ತೆರಿಗೆ ಕಡಿತಗೊಳಿಸಬೇಕು ಎಂಬುದಾಗಿ ಖಾಸಗಿ ಸಾರಿಗೆ ಒಕ್ಕೂಟ ಬೇಡಿಕೆಗಳನ್ನು ಇಟ್ಟಿದೆ.