ಮತ್ತೆರಡು ಬ್ಯಾಂಕ್‌ಗಳ ಖಾಸಗೀಕರಣಕ್ಕೆ ನೀತಿ ಆಯೋಗ ಶಿಫಾರಸು

ನವದೆಹಲಿ: ಕೇಂದ್ರದ ಬಿಜೆಪಿ ಸರಕಾರದ ಅಡಿಯಲ್ಲಿ ಬ್ಯಾಂಕುಗಳ ಖಾಸಗೀಕರಣದ ಪ್ರಕ್ರಿಯೆಗಳು ಮುಂದುವರೆದಿದ್ದು ಸದ್ಯ ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಬೇಕೆಂದು ನೀತಿ ಆಯೋಗವು ಶಿಫಾರಸು ಮಾಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2020-2021ರ ಸಾಲಿನ ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಸರಕಾರಿ ಒಡೆತನದ ಸಂಸ್ಥೆಗಳನ್ನು ಖಾಸಗೀಕರಿಸುವ ಬಗ್ಗೆ ಉಲ್ಲೇಖಿಸಿದ್ದರು. ಅದೇ ಸಂದರ್ಭದಲ್ಲಿ ಎರಡು ಸರಕಾರೀ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುತ್ತಿರುವುದಾಗಿ ತಿಳಿಸಿದ್ದರು.

ಇದನ್ನು ಓದಿ: ವಿಧ್ವಂಸದ ಎರಡು ಯಾತನಾಮಯ ವರ್ಷಗಳು

ಸರಕಾರದ ಹೊಸದಾದ ನೀತಿ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗೆಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ.  ಬಂಡವಾಳ ಹೂಡಿಕೆ ಮತ್ತು ಸಾರ್ವಜನಿಕ ಸೊತ್ತು ನಿರ್ವಹಣೆ ಇಲಾಖೆ ಹಾಗೂ ಆರ್ಥಿಕ ಸೇವಾ ಇಲಾಖೆಗಳು ನೀತಿ ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ, ಅದನ್ನು ಜಾರಿಗೊಳಿಸುವ ಬಗ್ಗೆ ಕಾನೂನಾತ್ಮಕ ಸಲಹೆ ನೀಡಲಿದೆ.

ಹಾಲಿ ಆರ್ಥಿಕ ವರ್ಷದಲ್ಲಿ ಶೇರುಗಳ ಮಾರಾಟದಿಂದ 1.75 ಲಕ್ಷ ಕೋಟಿಗಳನ್ನು ಸಂಗ್ರಹಿಸಿಕೊಳ್ಳುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.

Donate Janashakthi Media

Leave a Reply

Your email address will not be published. Required fields are marked *