ಸಚಿವ ಪ್ರಿಯಾಂಕ್ ಖರ್ಗೆ ‘ ಭವಿಷ್ಯದ ನಾಯಕ’ : ಡಾ.ಜಿ.ಪರಮೇಶ್ವರ್

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭವಿಷ್ಯದ ನಾಯಕ ಗೃಹಸಚಿವ ಡಾ.ಜಿ.ಪರಮೇಶ್ವರ್ ಭವಿಷ್ಯ ನುಡಿದಿದ್ದಾರೆ. ಕರದಾಳ ಗ್ರಾಮದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು’ ಭವಿಷ್ಯದ ನಾಯಕ ‘ ಎಂದು ಸಂಭೋದಿಸಿ ಪರಮೇಶ್ವರ ಮಾತು ಪ್ರಾರಂಭಿಸಿದ್ದು ವಿಶೇಷವೆನಿಸಿತು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ದೆಹಲಿಯಲ್ಲಿ ಅಧಿಕಾರಕ್ಕೆ ಬರುವಂತೆ ಆಶೀರ್ವದಿಸಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಮನವಿ ಮಾಡಿದರು.

ಬಿಜೆಪಿ ಪಕ್ಷ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡಿಕೊಂಡು ಮತ ಕೇಳುತ್ತಿದೆ ಎಂದು ಆರೋಪಿಸಿದ ಗೃಹ ಸಚಿವರು, ಹಿಂದೂ ಧರ್ಮದ ಹೆಸರಿನಲ್ಲಿ ಮಾಡಬಾರದ ಕೆಲಸಗಳನ್ನೆಲ್ಲ ಮಾಡುತ್ತಿದ್ದಾರೆ. ನಾವು ಯಾರು ಹಿಂದೂಗಳು ಅಲ್ಲವೇ? ನಾವು ರಾಮನ ಭಕ್ತರಲ್ಲವೇ? ದೇವಾಲಯಕ್ಕೆ ಹೋಗುವುದಿಲ್ಲವೇ? ಧರ್ಮದ ಆಧಾರದ ಮೇಲೆ ಚುನಾವಣೆಗೆ ಬಂದವರಿಗೆ ಮತ ಹಾಕಬೇಡಿ ಎಂದು ಪರಮೇಶ್ವರ ಹೇಳಿದರು.

ಇದನ್ನು ಓದಿ : ಮಹಿಳೆಯರ ಬಗ್ಗೆ ಗೌರವವಿದ್ದರೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಭೇಟಿ ಮಾಡಿ; ಡಿಕೆ ಶಿವಕುಮಾರ್

ಯುವಕರಿಗೆ ಉದ್ಯೋಗ ಕೊಡಲು ವಿಫಲರಾಗಿರುವ ಪ್ರಧಾನಿ ನರೇಂದ್ರ ಮೋದಿ ಪಕೋಡ ಮಾರಲು ಹೇಳಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು 18,171 ಕೋಟಿ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಸಚಿವರಾದ ಕೃಷ್ಣ ಭೈರಗೌಡ ಹಾಗೂ ಪ್ರಿಯಾಂಕ್ ಖರ್ಗೆ ಕೊನೆಗೆ ಸಿಎಂ ಹೋಗಿ ಬಂದರು ಆಗಲೂ ಪ್ರಯೋಜನವಾಗಲಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಕೇಂದ್ರದ ವಿರುದ್ದ ಸುಪ್ರಿಂ ಕೋರ್ಟ್ ಗೆ ಹೋಗಬೇಕಾಯಿತು. ಬರ ಪರಿಹಾರ ಬಿಡುಗಡೆ ಆಗ್ರಹಿಸಿ ರಾಜ್ಯ ಸರ್ಕಾರ ಕೇಂದ್ರದ ವಿರುದ್ದ ಕೇಸು ಹಾಕಿದ್ದು ಬಹುಶಃ ಇದೇ ಮೊದಲು. ಯಾವಾಗ ಕೋರ್ಟ್ ಛೀಮಾರಿ ಹಾಕಿತೋ ಆಗ 3474 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಮನಸಿನಾಳದ ಮಾತುಗಳನ್ನು ನೀವೆಲ್ಲ ಕೇಳಿದ್ದೀರಿ. ಅವರು ಮಾತು ಕೇಳಿದಾಗ ನಮಗೆ ಕಣ್ಣಲ್ಲಿ ನೀರು ಬಂತು.ಕಳೆದ ಸಲ ಅವರನ್ನ ಸೋಲಿಸಿದ್ದೀರಿ. ಈ ಸಲ ಅವರಿಗೆ ಆಶೀರ್ವಾದ ಮಾಡಿ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಗೆಲ್ಲುವುದು ಕೂಡಾ ಅಷ್ಟೇ ಸತ್ಯ ಎಂದು ಪರಮೇಶ್ವರ ಹೇಳಿದರು.

ಚುನಾವಣೆ ನಂತರ ಐದು ಗ್ಯಾರಂಟಿಗಳನ್ನು ನಿಲ್ಲಿಸಿಬಿಡುತ್ತಾರೆ ಎಂದು ಬಿಜೆಪಿಯವರು ಸುಳ್ಳು ಹಬ್ಬಿಸುತ್ತಿದ್ದಾರೆ. ಅವರ ಮಾತುಗಳನ್ನು ನಂಬಬೇಡಿ. ಯಾವುದೇ ಕಾರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿದರು.

ಇದನ್ನು ನೋಡಿ : ಉಪ್ಪ ತಿಂದ ಮ್ಯಾಲೆ, ನೀರ ಕುಡಿಯಲೆಬೇಕು – ಕಲಾ ತಂಡ ಬೆಂಗಳೂರು Janashakthi Media

Donate Janashakthi Media

Leave a Reply

Your email address will not be published. Required fields are marked *