ಕೇರಳದ ವಯನಾಡ್‌: ಲೋಕಸಭೆಯ ಸಂಸದರಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಲೋಕಸಭೆಯ ಸಂಸದರಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇರಳ

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬೆನಲ್ಲೇ ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಿಯಾಂಕಾ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ನಾಂದೇಡ್ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್ (ಕಾಂಗ್ರೆಸ್) ಕೂಡ ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ : ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಾಜಗೊಳಿಸಿದ ದೆಹಲಿ ಹೈಕೋರ್ಟ್‌

ಇತ್ತೀಚೆಗೆ ಅವರ ತಂದೆ ವಸಂತರಾವ್‌ ಚವಾಣ್ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು. ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು. ಮತ್ತು ನಂತರ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಪ್ರಿಯಾಂಕಾ ಗಾಂಧಿ ಅವರು ಚುನಾಯಿತ ಜನಪ್ರತಿನಿಧಿಯಾಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ.

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಿಯಾಂಕಾ ಅವರು ಕೇರಳದ ಬೋಕೆಡ್ ಸೀರೆಯನ್ನು ಧರಿಸಿದ್ದರು. ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನಕ್ಕೆ ಆಗಮಿಸಿದ್ದರು. ಅಲ್ಲದೆ, ಪ್ರಿಯಾಂಕಾ ಅವರ ಮಕ್ಕಳಿಬ್ಬರೂ ಸಂಸತ್‌ಗೆ ಆಗಮಿಸಿದ್ದರು.

ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

ಇಲ್ಲಿಯವರೆಗೆ ಪಕ್ಷ ಸಂಘಟನೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಗೆ ನೆರವು ನೀಡುತ್ತಾ ಬಂದಿದ್ದ ಪ್ರಿಯಾಂಕಾ ಗಾಂಧಿ, ಇದೀಗ ಲೋಕಸಭೆಯಲ್ಲೂ ತಮ್ಮ ಸಹೋದರನಿಗೆ ಸಾಥ್ ನೀಡಲಿದ್ದಾರೆ.

ಇದನ್ನೂ ನೋಡಿ : ಒಂದು ದೇಶ, ಒಂದು ಚುನಾವಣೆ | ಒಂದು… ಒಂದು.. ಎನ್ನುವುದರ ಹಿಂದೆ ದೇಶಕ್ಕೆ ಕಾದಿದೆ ಅಪಾಯ – ಡಾ.ಸಿದ್ದನಗೌಡ ಪಾಟೀಲ್

Donate Janashakthi Media

Leave a Reply

Your email address will not be published. Required fields are marked *