ಬೆಂಗಳೂರು: ನಗರದ ಪಂಚತಾರಾ ಹೋಟೆಲ್‌ಗೆ ‘ರಾಜಭಾಷಾ’ ಹೆಸರಿನಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಯ ಸದಸ್ಯರು ನುಗ್ಗಿ ಪ್ರತಿಭಟಿಸಿದ ಘಟನೆ ಸೆಪ್ಟೆಂಬರ್ 25ರಂದು ನಡೆದಿದೆ.
ಗೃಹ ಸಚಿವಾಲಯದ ರಾಜಭಾಷಾ ಸಮಿತಿಯು ಪಂಚತಾರಾ ಹೋಟೆಲ್‌ನಲ್ಲಿ ‘ಹಿಂದಿ ಪ್ರಚಾರ ಸಭೆ’ಯನ್ನು ಆಯೋಜಿಸಿತ್ತು. ಸ್ಥಳಕ್ಕೆ ಪ್ರತಿಭಟನಾಕಾರರು ಪ್ರವೇಶಿಸಿದಾಗ ಆರು ಸಂಸದರು ಹಾಜರಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ನಕಲಿ ವೈದ್ಯಕೀಯ ದಾಖಲೆ ಸಲ್ಲಿಕೆ; ಐವರ ಬಂಧನ
ಕಾರ್ಯಕ್ರಮದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಕಾರ್ಯಕರ್ತರು ಈ ಸಭೆಯು ಹಿಂದಿಯೇತರ ಮಾತನಾಡುವ ರಾಜ್ಯಗಳ ಮೇಲೆ ಹಿಂದಿ ಹೇರುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಹಠಾತ್ ಪ್ರತಿಭಟನೆಯು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿತು. ಆದರೆ, ತಕ್ಷಣವೇ ಪೊಲೀಸರು ಮಧ್ಯಪ್ರವೇಶಿಸಿದರು.
ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಯಾವುದೇ ಮುನ್ಸೂಚನೆ ನೀಡದೆಯೇ ಸ್ಥಳಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಇದನ್ನೂ ನೋಡಿ: 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
