ಬೆಂಗಳೂರು: ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಪ್ರೊಫೆಸರ್ ಓರ್ವರು ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ಭಯೋತ್ಪಾದಕ, ಟೆರರಿಸ್ಟ್ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ನಗರದ ಬನಶಂಕರಿಯ ರಿಂಗ್ ರೋಡ್ ನಲ್ಲಿರುವ ಪಿಇಎಸ್ ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ಎಂದು ಗುರುತಸಲಾಗಿದೆ.
ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಅಕ್ರಮ ಆರೋಪ: KSOU ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ, ಬ್ಯಾಂಕ್ ಖಾತೆ ಫ್ರೀಜ್’ಗೆ ಆದೇಶ
ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು ಗಲಾಟೆ ಮಾಡುತ್ತಿದ್ದರು. ಈ ವೇಳೆ ಮುಸ್ಲಿಂ ವಿದ್ಯಾರ್ಥಿಯನ್ನು ಗದರಿದ ಪ್ರಾಧ್ಯಾಪಕ ದೇಶಪಾಂಡೆ, ನೀವೆಲ್ಲಾ ಭಯೋತ್ಪಾದಕರು, ಗಲಾಟೆ ಮಾಡಲು ನಾಚಿಕೆಯಾಗಲ್ವಾ? ಎಂದು ಬಾಯಿಗೆ ಬಂದಂತೆ ಬೈದಿದ್ದಾರೆ.
ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಅರಿತ ವಿಶ್ವವಿದ್ಯಾಲಯದ ಆಡಳಿತ ಮಂದಳಿ ತಕ್ಷಣ ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.
ಇದನ್ನೂ ನೋಡಿ: “ಬಸವಣ್ಣರಿಂದ ಕುವೆಂಪುವರೆಗೂ: ಮಾನವೀಯತೆ ಬೆಳೆಸುವ ಕನ್ನಡ ಚಿಂತನೆ” – ಎಲ್ ಎನ್ ಮುಕುಂದರಾಜ್ Janashakthi Media
