ಪ್ರಗತಿಪರ ಸಾಹಿತಿಗಳಿಗೆ ಜೀವ ಬೆದರಿಕೆ ಪ್ರಕರಣ| ಹಿಂದುತ್ವ ಸಂಘಟನೆ ಕಾರ್ಯಕರ್ತ ಅರೆಸ್ಟ್..!

ಬೆಂಗಳೂರು: ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಸಾಹಿತಿ, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರ: ಎಫ್‌ಐಆರ್ ದಾಖಲು

ಪತ್ರ ಬರೆಯುತ್ತಿದ್ದ ಹಿಂದುತ್ವ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಗುಮಾನಿ ವ್ಯಕ್ತವಾಗಿತ್ತು.

ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು. ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ:ಬರಹಗಾರರಿಗೆ ಕೊಲೆ ಬೆದರಿಕೆ ಪತ್ರ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು. ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.

ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು ಎಂಬ ಅಂಶವನ್ನು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನೋಡಿ:ಗೌರಿ ಹತ್ಯೆ ಪ್ರಕರಣದ ವಿಚಾರಣೆ ವೇಗವಾಗಿ ನಡೆಯುತ್ತಿದೆ – ಸಿಎಂ ಸಿದ್ದರಾಮಯ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *