ನೂಪುರ್‌, ಜಿಂದಾಲ್‌ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ: ಇಬ್ಬರು ಸಾವು

ರಾಂಚಿ: ಪ್ರವಾದಿ ಮಹಮ್ಮದ್ ಪೈಂಗಬರ್​​​​ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ, ಮುಸ್ಲಿಂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೂಪುರ್ ಶರ್ಮಾ, ಹಾಗೂ ನವೀನ್‌ ಜಿಂದಾಲ್ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ರಾಂಚಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ಪ್ರಾರ್ಥನೆ ಮುಕ್ತಾಯಗೊಳ್ಳುತ್ತಿದ್ದಂತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಸ್ಲಿಮರು ಏಕಾಏಕಿ ಪ್ರತಿಭಟನೆ ನಡೆಸಲು ಬೀದಿಗಿಳಿದರು. ಉತ್ತರಪ್ರದೇಶದ ಪ್ರಯಾಗ್​​ರಾಜ್​​ನಲ್ಲಿ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರನ್ನು ಹತೋಟಿಗೆ ತರುವ ಉದ್ದೇಶದಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಕಾರು, ಬೈಕ್​​​ಗಳಿಗೆ ಬೆಂಕಿ ಹಚ್ಚಿದ್ದಾರೆ.

ರಾಂಚಿಯಲ್ಲಿ ನಡೆದ ಹಿಂಸಾಚಾರದಿಂದಾಗಿ ವಾಹನಗಳಿಗೆ ಹಾನಿಯಾಗಿರುವುದರಿಂದ ಅಲ್ಲಿನ ಕೆಲ ಪ್ರದೇಶಗಳಲ್ಲಿ ಕರ್ಫೂ  ವಿಧಿಸಲಾಗಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಪ್ರತಿಭಟನಕಾರರಲ್ಲಿ ಮನವಿ ಮಾಡಿದ್ದಾರೆ.

ಜಾರ್ಖಂಡ್ ಮಾತ್ರವಲ್ಲದೆ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದಲ್ಲೂ ಇದೇ ರೀತಿಯ ಘರ್ಷಣೆಗಳು ನಡೆದಿವೆ. ಈ ಘಟನೆಗಳಲ್ಲಿ 20 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಭದ್ರತಾ ಸಿಬ್ಬಂದಿಯೇ ಹೆಚ್ಚಾಗಿದ್ದಾರೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕರ್ನಾಟಕದಲ್ಲಿಯೂ ಜನರು ಬೀದಿಗಿಳಿದು ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *