ಜಾತಿ ಆಧಾರಿತವಾಗಿ ಥಳಿಸಿದ ಆರೋಪಿಗಳ ಬಂಧನಕ್ಕೆ ಪ್ರತಿಭಟನೆ; ಪೊಲೀಸ್ ಮೇಲೆ ಕಲ್ಲು ತೂರಾಟ

ಲಖನೌ: ಉತ್ತರ ಪ್ರದೇಶದ ಇಟವಾ ಜಿಲ್ಲೆಯ ದಂಡರ್‌ಪುರ ಗ್ರಾಮದಲ್ಲಿ ಇತ್ತೀಚಿಗೆ ನಡೆದಿದ್ದ ಭಗವತ್ ಕಥಾ ಬೋಧಕ ಮತ್ತು ಆಪ್ತರವನ್ನು ಜಾತಿ ಆಧಾರಿತವಾಗಿ ಥಳಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಸಂತ್ರಸ್ತರ ವಿರುದ್ಧ ದಾಖಲಾದ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿ ಯಾದವ ಗುಂಪುಗಳ ಸದಸ್ಯರು ಜೂನ್‌ 26 ಗುರುವಾರ ಪ್ರತಿಭಟನೆ ನಡೆಸಿದ್ದರಿಂದ ಉದ್ವಿಗ್ನತೆ ಹೆಚ್ಚಾಯಿತು.

ಆಗ್ರಾ-ಕಾನ್ಪುರ್ ಹೆದ್ದಾರಿಯ ಬಳಿ ಮತ್ತು ಬಕೇವಾರ್ ಪ್ರದೇಶದ ಹಳ್ಳಿಯಲ್ಲಿ ಗುಂಪು ಗುಂಪಾಗಿ ಜನ ಸೇರಿದ್ದರು. ಕಿರಿದಾದ ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಎಚ್ಚರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದಾಗ ಅಪರಿಚಿತ ವ್ಯಕ್ತಿಗಳು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಕಾರ್ಮಿಕ ಕಾನೂನು ವಿರೋಧಿಸಿ ಪ್ರತಿಭಟನೆ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗಲಭೆಗೆ ಜಾತಿ ಹಣೆಪಟ್ಟಿ ಕಟ್ಟಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಉತ್ತರ ಪ್ರದೇಶ ಸಚಿವ ಜೈವೀರ್ ಸಿಂಗ್ ಆರೋಪಿಸಿದ್ದಾರೆ.

ಗಲಭೆ ಸಂಬಂಧ 20 ವ್ಯಕ್ತಿಗಳನ್ನು ಬಂಧಿಸಲಾಗಿದ್ದು, 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಈಗ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದ್ದು ಪರಿಸ್ಥಿತಿ ಸಹಜವಾಗಿದೆ ಎಂದು ಇಟಾವಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಬ್ರಿಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

ಇದನ್ನೂ ನೋಡಿ: ಕೌಶಲ್ಯದ ಹೆಸರಲ್ಲಿ ಕಾರ್ಮಿಕ ಮಂಡಳಿಯ ಹಣ ವ್ಯಯ – ಕಾರ್ಮಿಕ ಸಂಘಟನೆಗಳ ಆಕ್ಷೇಪ

Donate Janashakthi Media

Leave a Reply

Your email address will not be published. Required fields are marked *