ಟಿ. ನರಸೀಪುರ: ಟಿ. ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದೂ, ಕಾರ್ಖಾನೆ ಸಿಬ್ಬಂದಿಗಳು ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿ ಫೆಬ್ರವರಿ 24ರಂದು ಬೃಹತ್ ಪ್ರತಿಭಟನೆ ನಡೆಸಿದರು.
ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಇದನ್ನೂ ಓದಿ: ನೆಗಿನಾಳ| ಸರ್ಕಾರಿ ಶಾಲೆ ಮುಚ್ಚುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ
ಈ ಕುರಿತು ಪೋಸ್ಟ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಟಿ.ನರಸೀಪುರದ ಕೆಎಸ್‌ಐಸಿ ಸಿಲ್ಕ್ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವುದನ್ನು ವಿರೋಧಿಸಿ ಕಾರ್ಖಾನೆ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಲಾಯಿತು ಎಂದು ಹೇಳಿದ್ದಾರೆ.
ಇದನ್ನೂ ನೋಡಿ: “ಯು.ಎಸ್ ಸಾಮ್ರಾಜ್ಯಶಾಹಿ : ಭಾರತ ಜನತೆಯ ಶತ್ರು” | ಹಿನ್ನೆಲೆ ಧ್ವನಿ : ಗುರುರಾಜ ದೇಸಾಯಿ Janashakthi Media
