ಕೋಲ್ಕತ್ತ| ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆ: 110 ಜನರ ಬಂಧನ

ಕೋಲ್ಕತ್ತ: ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಜ್ಯದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 110 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಏಪ್ರಿಲ್‌ 12 ಶನಿವಾರ ತಿಳಿಸಿದ್ದಾರೆ. ಕೋಲ್ಕತ್ತ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ಹಿಂಸಾತ್ಮಕತೆಗೆ ತಿರುಗಿದೆ. ಕಳೆದ ದಿನ (ಏಪ್ರಿಲ್ 11, 2025) ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಹಿಂಸಾಚಾರ ಮೆರೆದಿದ್ದಾರೆ.

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ಓದಿ: ನವದೆಹಲಿ| ಮತ್ತೆ ಯುಪಿಐ ಸರ್ವರ್ ಡೌನ್ ; ಜನರ ಆಕ್ರೋಶ

ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸುತಿ ಮತ್ತು ಶಂಶೇರ್‌ಗಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ಉಗ್ರ ಸ್ವರೋಪ ಪಡೆದುಕೊಂಡಿತ್ತು. ಪೊಲೀಸರು ಪ್ರತಿಭಟನಾಕಾರರನ್ನು ಎಷ್ಟೇ ಪ್ರಯತ್ನಪಟ್ಟರೂ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಲಿಲ್ಲ ಎಂಬುದಾಗಿ ವರದಿಯಾಗಿದೆ.

ಇದನ್ನೂ ನೋಡಿ: ಬದುಕನ್ನು ಕಿತ್ತುಕೊಂಡ ʼವೈಟ್‌ ಟಾಪಿಂಗ್‌ ಕಾಮಗಾರಿʼ! Janashakthi Media

Donate Janashakthi Media

Leave a Reply

Your email address will not be published. Required fields are marked *