ಬರ ಪರಿಹಾರ, ಕೇಂದ್ರದ ತಾರತಮ್ಯ ನೀತಿ| ದೆಹಲಿಯಲ್ಲಿ ಫೆಬ್ರವರಿ 7 ರಂದು ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ತಾರತಮ್ಯ ನೀತಿಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ.7 ರಂದು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬರ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಮುಂದುವರೆದು ಮಾತನಾಡಿದ ಅವರು, 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 47 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ. ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಆದ್ರೆ ಕಳೆದ 5 ವರ್ಷಗಳ ಬಜೆಟ್ ನೋಡಿದ್ರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಬರ

ಇದನ್ನೂ ಓದಿ‘ದೇಶದ ಜನರನ್ನು ವಂಚಿಸುವ ಪ್ರಯತ್ನ’ – ಬಜೆಟ್ ಬಗ್ಗೆ ಪ್ರತಿಪಕ್ಷಗಳ ಪ್ರತಿಕ್ರಿಯೆ

2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40 ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64%ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ 5 ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನೂ ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ 136+2 ಒಟ್ಟು 138 ಶಾಸಕರು, ಎಲ್ಲಾ ಪರಿಷತ್ ಸದಸ್ಯರು ಫೆ.6ರಂದು ದೆಹಲಿಗೆ ತಲುಪಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ವ್ಯಕ್ತಪಡಿಸುತ್ತೇವೆ. ನಮ್ಮ ಧ್ವನಿಯನ್ನು ದೆಹಲಿ ಸರ್ಕಾರಕ್ಕೆ ಮುಟ್ಟಿಸಲು ಮುಂದಾಗಿದ್ದೇವೆ. ಫೆ.7ರಂದು ಬೆಳಗ್ಗೆ 10 ಗಂಟೆಗೆ ನಮಗೆ ಅನುಮತಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತೇವೆ.ಈ ಪ್ರತಿಭಟನೆಗೆ ರಾಜ್ಯದ ಎಲ್ಲಾ ಸಂಸದರಿಗೆ ಆಹ್ವಾನ ನೀಡಲಾಗುವುದು. ಎಲ್ಲರೂ ರಾಜ್ಯದ ಹಿತ ಕಾಯಲು ಪಕ್ಷಾತೀತವಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು. ಬರ

ಈ ವಿಡಿಯೋ ನೋಡಿಚರ್ಚೆ : ಮಧ್ಯಂತರ ಬಜೆಟ್ : ಚುನಾವಣೆ ಮೇಲೆ ಕಣ್ಣು, ಸುಳ್ಳಿನ ಕಂತೆ, ಜನಸಾಮಾನ್ಯರಿಗೆ ನಿರಾಸೆ

 

Donate Janashakthi Media

Leave a Reply

Your email address will not be published. Required fields are marked *