ಗಂಗಾವತಿ: ಅರ್ಜಿಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪಿ.ಯು.ಸಿ. ವಿದ್ಯಾರ್ಥಿಗಳ ಕಾಲೇಜು ಪ್ರಾರಂಭವಾಗಿ 2 ತಿಂಗಳು ಕಳೆದು 3ನೇ ತಿಂಗಳಿನಲ್ಲಿ ಇರುತ್ತದೆ ಸಾವಿರಾರು ವಿದ್ಯಾರ್ಥಿಗಳ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಕ್ಕಾಗಿ ಪ್ರಾರಂಭವಾಗಿರುವ ಹಾಸ್ಪೆಲ್‌ಗಳಿಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ರಾಜ್ಯಾಧ್ಯಕ್ಷ ಅಮರೇಶ ಕಡಗದ, ಅಧ್ಯಕ್ಷ ಗ್ಯಾನೇಶ ಕಡಗದ ಮಾತ್ತು ಕಾರ್ಯದರ್ಶಿ ಶಿವಕುಮಾರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ತಾಲೂಕ ಸಮಿತಿಗೆ ಮನವಿ ಮಾಡಿಕೊಂಡಿದ್ದಾರೆ.
ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ್ ಕಡಗದ್ ಮಾತನಾಡಿ, ಅನೇಕ ಗ್ರಾಮೀಣ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ತಮ್ಮ ಉತ್ತಮ ಗುಣಟ್ಟದ ಶಿಕ್ಷಣಕ್ಕಾಗಿ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಸತಿನಿಲಯಗಳ ಮೇಲೆ ಅವಲಂಬಿತರಾಗಿದ್ದಾರೆ. ನಮ್ಮ ತಾಲೂಕಿನಲ್ಲಿ ಮೇಲ್ಕಾಣಿಸಿದ ೪ ಇಲಾಖೆಗಳಿಗೆ ಈಗಾಗಲೇ ಸಾವಿರಾರು ವಿದ್ಯಾರ್ಥಿಗಳ ಅರ್ಜಿಗಳನ್ನು ಸಲ್ಲಿಸಿ ಆಯ್ಕೆ ಪಟ್ಟಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದರೂ ಇಲಾಖೆಯ ಅಧಿಕಾರಿಗಳು ಮತ್ತು ಶಾಸಕ ಸಚಿವರ ನಿರ್ಲಕ್ಷದಿಂದಾಗಿ ಬಡ ವಿದ್ಯಾರ್ಥಿಗಳ ಗೋಳು ಕಣ್ಣೀರಿನಲ್ಲಿ ತೊಳೆಯುವಂತಾಗಿದೆ. ಅರ್ದವಾರ್ಷಿಕ ಪರೀಕ್ಷೆ ಹತ್ತಿರ ಬರುತ್ತಿದ್ದರೂ, ವಿದ್ಯಾರ್ಥಿಗಳ ಓದಿಗೆ ಬೆಳಕಾಗಬೇಕಾದ ಹಾಸ್ಟೇಲ್‌ಗಾಗಿ ದಿನನಿತ್ಯ ಇಲಾಖೆಗೆ ಅಲೆದಾಡುವಂತಾಗಿದೆ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳಿಗೆ ಸಾವಿರಾರು ವಿದ್ಯಾರ್ಥಿಗಳ ಅರ್ಜಿಯನ್ನು ಸಲ್ಲಿಸಿದರು ಬೆರಳೆಣಕೆಯಷ್ಟುವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೇಲ್ ಸೌಲಭ್ಯ ಸಿಗುತ್ತದೆ ಇದರಿಂದ ವಿದ್ಯಾರ್ಥಿಗಳು ಹಾಸ್ಟೇಲ್ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371 ಜೆ. ಕಲಂ ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಈ ಭಾಗಕ್ಕೆ ಪ್ರತಿವರ್ಷ ಬರುವ ರೂ. 5,೦೦೦.೦೦ ಸಾವಿರ ಕೋಟಿ ರೂಪಾಯಿ ಅನುದಾನದಲ್ಲ ಕೇವಲಾ ಕಟ್ಟಡ, ಸಿ.ಸಿ. ರಸ್ತೆ, ಬಸ್ ಖರೀದಿ ಇತ್ಯಾಧಿ ಕಾಮಗಾರಿಗಳಿಗೆ 8೦% ಅನುದಾನ ಖರ್ಚಾಗುತ್ತದೆ ಈ ಅನುದಾನದಲ್ಲಾದರೂ, ಹಾಸ್ಟೇಲ್ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯವನ್ನು ಕಲ್ಪಿಸಿಸಲು ಹಣ ಮೀಸಲಿಡಿ ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಎಸ್.ಎಫ್.ಐ. ಮುಖಂಡರನ್ನು ಒಳಗೊಂಡಂತೆ ಸಭೆ ನಡೆಸಿ ಎಂದು ಹೇಳಿದರು.
ಆದ್ದರಿಂದ ಈ ಕೂಡಲೇ ನಾಲ್ಕು ಇಲಾಖೆಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ೨೪ ಗಂಟೆಗಳ ಒಳಾಗಿ ಸರ್ಕಾರಿ ನಿಯದ ಪ್ರಕಾರ ಇಲಾಖೆಯ ರೋಸ್ಟರ್ ನಿಯಮಗಳನ್ನು ಒಳಗೊಂಡಂತೆ ವಿದ್ಯಾರ್ಥಿಗಳ ಹಾಸ್ಟೇಲ್ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಇಂದು ತಾಲೂಕಪಂಚಾಯತ್ ಕಾರ್ಯಾಲಯದ ಮುಂದೆ ಪ್ರತಿಭಟನೆಯನ್ನು ಮಾಡಿ ಮನವಿ ಸಲ್ಲಿಸುತ್ತಿದ್ದೇವೆ, ಇಲ್ಲವಾದಲ್ಲಿ ನೂರಾರು ವಿದ್ಯಾರ್ಥಿಗಳೊಂದಿಗೆ ಅನಿರ್ಧಿಷ್ಟ ಧರಣಿ ಮಾಡಲಾಗುವುದು ಎಂದು ಈ ಪ್ರತಿಭಟನೆ ಮೂಲಕ ಒತ್ತಾಯಿಸುತ್ತಿದ್ದೇವೆ ಎಂದರು.
ಎಸ್‌ಎಫ್‌ಐ ತಾಲ್ಲೂಕ ಅಧ್ಯಕ್ಷ ಗ್ಯಾನೇಶ್ ಕಡಗದ್, ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ನಾಗರಾಜ್. ಯು. ಮಾರುತಿ. ಬಾಲಾಜಿ. ರಾಜಭಕ್ಸಿ. ಕಾವ್ಯ. ದೇವಮ್ಮ. ಮಲ್ಲಮ್ಮ. ಸುಮಿತ್ರಾ. ಶಾರದಾ. ಲಕ್ಷ್ಮಿ. ರೇಣುಕಾ. ನಂದಿನಿ ಇತರರು ಇದ್ದರು.
ಹಾವೇರಿ : ಆಯ್ಕೆ ಪಟ್ಟಿ ವಿಳಂಬ ಖಂಡಿಸಿ ಪ್ರತಿಭಟನೆ
2024-25 ನೇ ಸಾಲಿನ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬ ನೀತಿಯನ್ನು ಖಂಡಿಸಿ, ಕೂಡಲೇ ಆಯ್ಕೆ ಬಿಡುಗಡೆಗಾಗಿ ಆಗ್ರಹಿಸಿ, ನೂತನವಾಗಿ ಮಂಜೂರಾದ ವಸತಿ ನಿಲಯವನ್ನು ಪ್ರಾರಂಬಿಸಿ, ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಣೇಬೆನ್ನೂರ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಸ್ ನಿಲ್ದಾಣದಿಂದ ಬಿಸಿಎಮ್ ಇಲಾಖೆ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎದುರು ಧರಣಿ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆಗಾಗಿ ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಮಾತನಾಡಿ, ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ 2-3 ತಿಂಗಳಗಳ ಕಳೆದರು ಹಾಸ್ಟೆಲ್ ಬಯಸಿ ವಿದ್ಯಾರ್ಥಿಗಳು ಹಾಸ್ಟೆಲ್ ಅರ್ಜಿ ಹಾಕಿ ದಿನಾಲು ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ಹಣ ಕೊಟ್ಟು ಬರುತ್ತಿದ್ದಾರೆ. ಒಂದಡೆ ಅನೇಕ ಗ್ರಾಮಗಳಿಗೆ ಬಸ್ ಸೌಲಭ್ಯ ಇಲ್ಲ ಮತ್ತು ಅನೇಕ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಹಾಕಿ ಆಯ್ಕೆ ಪಟ್ಟಿ ಪ್ರಕಟಿಸುತ್ತಾರೆ ಎಂದು ಬಕಪಕ್ಷಿಗಳ ಹಾಗೆ ಕಾಯುತ್ತಿದ್ದಾರೆ ಮತ್ತು ಅನೇಕ ವಿದ್ಯಾರ್ಥಿಗಳು ದೂರದ ಊರಿನಿಂದ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಬರುತ್ತಿದ್ದಾರೆ.
“ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿ ಅನೇಕ ದಿನಗಳು ಕಳೆದರೂ ರಾಣೇಬೆನ್ನೂರ ತಾಲ್ಲೂಕಿನಲ್ಲಿ ಮಾತ್ರ ಈವರೆಗೂ ಆಯ್ಕೆ ಪ್ರಕ್ರಿಯೆ ವಿಳಂಬಕ್ಕೆ ಹೊಣೆ ಯಾರು?” ಆಯ್ಕೆ ಸಮಿತಿಯ ಅಧ್ಯಕ್ಷರು ಶಾಸಕರು ಆಗಿರುವುದರಿಂದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ವಿಳಂಬ ಮಾಡಬಾರದು ಹಾಗೂ ಎಸ್ಎಫ್ಐ ಹೋರಾಟದಿಂದ ನೂತನ ಮಂಜೂರಾದ ಹಾಸ್ಟೆಲ್ ಗಳನ್ನು ಕೂಡಲೇ ಯೋಗ್ಯವಾದ ಅಗತ್ಯ ಸೌಲಭ್ಯಗಳನ್ನು ಒಳಗೊಂಡ ಕಟ್ಟಡದಲ್ಲಿ ಪ್ರಾರಂಭಿಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್ ಗಳನ್ನು ಕಲ್ಪಿಸಬೇಕು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲಾ ತಾಲ್ಲೂಕ ವಿಸ್ತರಣಾಧಿಕಾರಿಗಳು ಎಚ್ಚೆತ್ತುಕೊಂಡು ಈ ಕೂಡಲೇ ಶಾಸಕರ ಗಮನಕ್ಕೆ ತಂದು ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕು. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ಎರಡು ತಿಂಗಳಿನಿಂದ ಶುಚಿ ಕಿಟ್ ನಿಡಿಲ್ಲ ಕೂಡಲೇ ನೀಡಬೇಕು. ಮೆನ್ ಚಾರ್ಟ್ ಪ್ರಕಾರ ಉತ್ತಮ ಗುಣಮಟ್ಟದ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಹಾಗೂ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 3.500 ರೂ ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಎಸ್ಎಫ್ಐ ಮುಖಂಡರಾದ ಶೃತಿ ಆರ್. ಎಮ್ ಮಾತನಾಡಿ, ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ವಿದ್ಯಾರ್ಥಿನಿಯರು ಪ್ರತಿನಿತ್ಯವು, ಹಾಸ್ಟೆಲ್ ಮುಂದೆ ವಸತಿ ನಿಲಯ ಪಾಲಕರನ್ನು ಕೇಳಿದ್ದಾರೆ ನಾಳೆ ಬಾ ಎಂಬ ಹಾರಿಕೆ ಉತ್ತರ ನಿಡುತ್ತಾರೆ. ಪ್ರತಿ ನಿತ್ಯವು ಕಾಲೇಜ್, ಹಾಸ್ಟೆಲ್, ಕಚೇರಿ ಓಡಾಡಿ ಸಾಕಾಗಿದೆ ಸಾಮಾನ್ಯ ಬಡ ವಿದ್ಯಾರ್ಥಿಗಳನ್ನು ಅಲೆದಾಡಿಸುವುದು ಖಂಡನೀಯ. ಅಧಿಕಾರಿಗಳು ಹಾಗೂ ಸರ್ಕಾರ ಎಚ್ಚೆತ್ತುಕೊಂಡು ಕಾಲೇಜ್ ಹಾಸ್ಟೆಲ್ ಏಕಕಾಲದಲ್ಲಿ ಪ್ರಾರಂಬಿಸಿಬೇಕು. ಅಗತ್ಯ ಸೌಲಭ್ಯಗಳ ಜೊತೆಗೆ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಹೆಚ್ಚುವರಿ ಪ್ರತ್ಯೇಕ ಬಸ್ ಬಿಡಬೇಕು ಹಾಗೂ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಸಿಎಮ್ ಇಲಾಖೆಯ ತಾಲ್ಲೂಕಾಧಿಕಾರಿ ವಿ.ಎಸ್. ಹಿರೇಮಠ ಎಸ್ಎಫ್ಐ ಕಾರ್ಯಕರ್ತರೊಂದಿಗೆ ಚರ್ಚಿಸಿ ಮಾತನಾಡಿದ ಅವರು ಶಾಸಕರು ಸ್ಥಳೀಯವಾಗಿ ಲಭ್ಯವಿರಲ್ಲಿಲ್ಲ ಆದರಿಂದ ಸ್ವಲ್ಪ ತಡವಾಗಿದೆ ಇವತ್ತು ಇಡೀ ದಿನ ಕಾದು ಕುಳಿತ ಫೈಲ್ ಸಹಿ ಆದ ತಕ್ಷಣವೇ ಆಯ್ಕೆ ಬಿಡುಗಡೆ ಮಾಡಲಾಗುವುದು ಎಂದರು.
ಆಯ್ಕೆ ಪಟ್ಟಿ ಬಿಡುಗಡೆ ಮಾಡುವವರೆಗೂ ಇಲಾಖೆಯ ಎದುರು ಹಗಲು ರಾತ್ರಿ ಧರಣಿ ನಡೆಸಲಾಗುವುದು ಎಂದು ಪಟ್ಟುಹಿಡಿದ್ದ ಎಸ್ಎಫ್ಐ ಕಾರ್ಯಕರ್ತರು ಅಧಿಕಾರಿಗಳು ಶಾಸಕರ ಕಚೇರಿಗೆ ಹೋಗಿ ಆಯ್ಕೆ ಪಟ್ಟಿ ಬಿಡುಗಡೆ ಮಾಡುವವರೆಗೂ ಧರಣಿ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಕೊಣಸಾಲಿ, ಕರಬಸಪ್ಪ ತೋಟಗೇರ್, ಶೃತಿ ಆರ್.ಎಮ್, ಖಲಂದರ್ ಬಿ.ಎಂ, ಜೀವನ್ ಕುಮಾರ ನಾಯಕ್, ಸಂಜೀವ ಮತ್ತೂರ, ಸಚಿನ್ ಹರಿಜನ ಪವನ್ ಕುಮಾರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.