ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು:  ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕೆಂದು ಅಗ್ರಹಿಸಿ ಶನಿವಾರ ರಾಮಸ್ವಾಮಿ ವೃತದಲ್ಲಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ನಿತಿನ್ ಅವರು ಮಾತನಾಡಿ ಕಳೆದ ಮೂರು ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನವು ಲಭ್ಯವಾಗುತ್ತಿಲ್ಲ. ಗಣನೀಯ ಪ್ರಮಾಣದ ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ವಿದ್ಯಾರ್ಥಿವೇತನದ ಮೇಲೆ ಅವಲಂಬಿತರಾಗಿಯೇ ಪದವಿ ಹಾಗೂ ಉನ್ನತ ಶಿಕ್ಷಣವನ್ನು ಪ್ರವೇಶಿಸುವ ಸಾಹಸಕ್ಕೆ ಮುಂದಾಗುತ್ತಾರೆ. ಇಲ್ಲವಾದಲ್ಲಿ ಶಿಕ್ಷಣವನ್ನು ತೊರೆಯುತ್ತಾರೆ.ಶಿಕ್ಷಣದ ವ್ಯಾಪಾರಿಕರಣವು ಈಗಾಗಲೇ ಬಡ ವಿದ್ಯಾರ್ಥಿಗಳ ಶಿಕ್ಷಣದ ಕನಸುಗಳನ್ನು ಸೀಮಿತ ಗೊಳಿಸುತ್ತದೆ. ಹೀಗಿರುವಾಗ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸುತ್ತಿರುವುದು ಕಡು ಶಿಕ್ಷಣ ವಿರೋಧಿ ಹಾಗೂ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ. ತಾನು ಬಡಜನರ ಪರ ಎಂದು ಹೇಳಿಕೊಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕೂಡ ಕಡಿತಗೊಳಿಸಿದೆ! ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ವಿವಿ ಹಾಸನದಲ್ಲೆ ಉಳಿಸಲು ಆಗ್ರಹಿಸಿ 3ನೇ ದಿನವು ಧರಣಿ ಮುಂದುವರಿಕೆ

ನಂತರ ಜಿಲ್ಲಾ ಉಪಾಧ್ಯಕ್ಷರಾದ ಸ್ವಾತಿ ಅವರು ಮಾತನಾಡಿ AIDSO ವಿದ್ಯಾರ್ಥಿ ಸಂಘಟನೆಯು ಕಳೆದ ಒಂದು ತಿಂಗಳಿಂದ ರಾಜ್ಯದಾದ್ಯಂತ ವಿದ್ಯಾರ್ಥಿಗಳ ನಡುವೆ ವಿದ್ಯಾರ್ಥಿ ವೇತನ ಕುರಿತಾಗಿ ಸಮೀಕ್ಷೆ ನಡೆಸಿದಾಗ ತಿಳಿದು ಬಂದಿರುವ ಆಘಾತಕಾರಿ ವಿಷಯವೇನೆಂದರೆ, ಪದವಿ, ಸ್ನಾತಕೋತ್ತರ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ 2022 ರಲ್ಲಿ ಸುಮಾರು ಶೇ. 40 ವಿದ್ಯಾರ್ಥಿಗಳಿಗೆ, 2023 ರಲ್ಲಿ ಶೇ. 65 ವಿದ್ಯಾರ್ಥಿಗಳಿಗೆ, 2024 ರಲ್ಲಿ ಶೇಕಡ. 95 ರಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಂದಿಲ್ಲದೆ ಇರುವುದು ಶೋಚನೀಯ ಪರಿಸ್ಥಿತಿ. ರಾಜ್ಯದಲ್ಲಿ ಒಟ್ಟು 4,90,372 ವಿದ್ಯಾರ್ಥಿಗಳಿಗೆ ,ಅದರಲ್ಲಿ ಮೈಸೂರು ಜಿಲ್ಲೆಯ 37,482 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಂದಿಲ್ಲ.ಜನರ ತೆರಿಗೆಯನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ವಿನಿಯೋಗಿಸದೆ ಸರ್ಕಾರವು ಜನರನ್ನು ವಂಚಿಸಿದೆ. ವಿದ್ಯಾರ್ಥಿ ವೇತನವು ಸರ್ಕಾರಗಳು ಕೊಡುವ ಭಿಕ್ಷೆ ಅಲ್ಲ ಬದಲಿಗೆ ವಿದ್ಯಾರ್ಥಿಗಳ ಹಕ್ಕಾಗಿದೆ .ಸರ್ಕಾರದ ಈ ವಂಚನೆಯ ವಿರುದ್ಧ ಧ್ವನಿ ಎತ್ತಲು ಎಐಡಿಎಸ್‌ಓ ಕರ್ನಾಟಕ ರಾಜ್ಯ ಸಮಿಯು 1 ಮಾರ್ಚ್ 2025ರಂದು ಬೆಂಗಳೂರಿನಲ್ಲಿ ‘ವಿದ್ಯಾರ್ಥಿವೇತನ ಉಳಿಸಿ’ ಪ್ರತಿಭಟನೆಗೆ ಕರೆ ನೀಡಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಹೇಮಾ ಅವರು ವಹಿಸಿಕೊಂಡಿದ್ದರು. ಜಿಲ್ಲಾಧ್ಯಕ್ಷರಾದ ಚಂದ್ರಕಲಾ,ಜಿಲ್ಲಾ ಪದಾಧಿಕಾರಿಗಳಾದ ಚಂದನ,ಚಂದ್ರಿಕಾ, ದಿಶ, ಅಂಜಲಿ, ನಂದೀಶ್, ಅಭಿಷೇಕ್,ರಾಕೇಶ್ ಮತ್ತು ಮಹಾರಾಜ, ಯುವರಾಜ ಹಾಗೂ ಶಾರದಾ ವಿಲಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಭಾರತೀಯ ಸ್ಟೇಟ್ ಬ್ಯಾಂಕ್ ಬಜಾಲ್ ಶಾಖೆಯ ಎಟಿಎಮ್ ಯಂತ್ರ ಕೂಡಲೇ ಮರುಸ್ಥಾಪನೆ: ಡಿವೈಎಫ್ಐ ಒತ್ತಾಯ

 

 

 

Donate Janashakthi Media

Leave a Reply

Your email address will not be published. Required fields are marked *