ಗೌರಿಬಿದನೂರು: ಮಾರ್ಚ್ 14ರಂದು ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭ ಮಾಡಲು ವಿಧಾನಸಭೆಯಲ್ಲಿ ಚರ್ಚೆ ಮಾಡಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಶಾಸಕರ ಗೃಹ ಕಚೇರಿ ಎದುರು ತಾಲ್ಲೂಕಿನ ಪ್ರತಿಭಟನೆ ನಡೆಸಿದರು. ಗೌರಿಬಿದನೂರು
ತಾಲ್ಲೂಕು ಪಂಚಾಯಿತಿ ಆವರಣದಿಂದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಕಾಲ್ನಡಿಗೆ ಮೂಲಕ ಶಾಸಕರ ಗೃಹ ಕಚೇರಿ ತಲುಪಿದರು.
ಇದನ್ನೂ ಓದಿ: ಹಕ್ಕುಗಳಿಗಾಗಿ ಮಹಿಳೆಯರು ಸಂಘಟಿತ ಹೋರಾಟ ಮಾಡಬೇಕು -ದೇವಿ
ರಾಜ್ಯದಲ್ಲಿ ಖಾಸಗಿ ಶಾಲೆಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಶಿಕ್ಷಣದ ಹೆಸರಿನಲ್ಲಿ ಲೂಟಿ ಮಾಡುತ್ತಿವೆ. ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಬಹಳಷ್ಟು ವರ್ಷಗಳಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಪ್ರಾರಂಭ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇವೆ.
ಇದರ ಸಾಧಕ ಬಾಧಕಗಳ ಬಗ್ಗೆ ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ವಿಧಾನ ಸಭೆಯಲ್ಲಿ ಚರ್ಚೆ ಮಾಡಬೇಕು ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಅಧ್ಯಕ್ಷೆ ಜಯಮಂಗಳಮ್ಮ, ಕಾರ್ಯದರ್ಶಿ ವೆಂಕಟಲಕ್ಷ್ಮಮ್ಮ, ಖಜಾಂಚಿ ರಾಧಮ್ಮ, ಸರಸ್ವತಮ್ಮ, ವಸಂತಲಕ್ಷ್ಮಿ, ಸುಗುಣ, ರಾಮಲಕ್ಷ್ಮಮ್ಮ, ಅಂಗನವಾಡಿ ಕೇಂದ್ರಗಳ ಶಿಕ್ಷಕಿಯರು ಮತ್ತು ಸಹಾಯಕಿಯರು ಭಾಗವಹಿಸಿದ್ದರು.
ಇದನ್ನೂ ನೋಡಿ: ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಗೆ ಖಂಡನೆ: ಸೌದೆ ಒಲೆ ಹಚ್ಚಿ ಸಿಪಿಐ(ಎಂ) ಪ್ರತಿಭಟನೆ Janashakthi Media
