ಬೆಂಗಳೂರು: ಆಶಾ ಕಾರ್ಯಕರ್ತೆಯರು, ಗೌರವ ಧನ ಹೆಚ್ಚಳ ಮಾಡಬೇಕು ಹಾಗೂ ಕೆಲಸದಿಂದ ವಜಾಗೊಳಿಸುವ ನಿರ್ಧಾರವನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿ ಫೆಬ್ರವರಿ 27ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಆರೋಗ್ಯ ಇಲಾಖೆಯ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಇದನ್ನೂ ಓದಿ: ವಸಾಹತುಶಾಹಿ ಯುಗವನ್ನು ನೆನಪಿಸುವ ಅಸಮಾನ ಒಪ್ಪಂದ
ಆದರೆ, ಇತ್ತೀಚೆಗೆ 7 ಸಾವಿರ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ವಜಾಗೊಳಿಸುವ ರಾಜ್ಯ ಸರ್ಕಾರದ ನಿರ್ಧರಿಸಿರುವುದು ಸರಿಯಲ್ಲ. ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಪ್ರಸ್ತುತ ನೀಡುತ್ತಿರುವ ಗೌರವ ಧನವನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
”ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹಳ್ಳಿ ಹಳ್ಳಿಗಳಿಂದ ಆಶಾ ಕಾರ್ಯಕರ್ತೆಯರು ಸೇರಿ, ವಿಧಾನಸೌಧ ಚಲೋ ಸೇರಿದಂತೆ ಅತ್ಯಂತ ಬೃಹತ್ ಮಟ್ಟದ ಉಗ್ರ ಹೋರಾಟವನ್ನು ನಡೆಸಲಿದ್ದೇವೆ” ಎಂದು ಇದೇ ಸಂದರ್ಭದಲ್ಲಿ ಅವರು ಎಚ್ಚರಿಕೆ ನೀಡಿದರು.
ಇದನ್ನೂ ನೋಡಿ: ಪಿಚ್ಚರ್ ಪಯಣ 167 |ಪಿಚ್ಚರ್ ಪಯಣ 167 | “Dry Leaf : ಆಟದ ಮಾಟ ಬದುಕಿನ ಪಾಠ”| Janashakthi Media
