ಬೆಳಗಾವಿ | ಚಳಿಗಾಲದ ಅಧಿವೇಶನದಲ್ಲಿ ಗೋಕಾಕ ಜಿಲ್ಲಾ ರಚನೆಗೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆ ವಿಭಜಿಸಿ ಗೋಕಾಕ ಕೇಂದ್ರಿತವಾಗಿ ಹೊಸ ಜಿಲ್ಲೆ ರಚನೆ ಮಾಡಬೇಕು.  ಗೋಕಾಕ ನಗರವನ್ನು ಹೊಸ ಜಿಲ್ಲಾ ಕೇಂದ್ರವಾಗಿ ಘೋಷಿಸಬೇಕು ಎಂದು ಒತ್ತಾಯಿಸಿ, ರಾಷ್ಟ್ರೀಯ ಮಜ್ದೂರ್‌ ಕಾಂಗ್ರೆಸ್‌ ಕರ್ನಾಟಕ ರಾಜ್ಯ ಶಾಖೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

‘ಈ ಬಗ್ಗೆ ನಾಲ್ಕು ದಶಕಗಳಿಂದ ಹಲವು ಸಂಘ–ಸಂಸ್ಥೆಯವರು ಮತ್ತು ಸಾರ್ವಜನಿಕರು ಹೋರಾಟ ನಡೆಸುತ್ತ ಬಂದಿದ್ದಾರೆ. ಜೆ.ಎಚ್‌.ಪಟೇಲ್‌ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗೋಕಾಕ ಜಿಲ್ಲೆ ಘೋಷಿಸಿ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ : ರಾಗಿಕಣ | ಗ್ರಾಮೀಣ ಸೊಗಡು ತಿಳಿಸುವ ಸಂತೆ

ಗೋಕಾಕ ಪ್ರತ್ಯೇಕ ಜಿಲ್ಲೆ ರಚಿಸುವಂತೆ ಮೂರು ಆಯೋಗದವರು ಸಹ ಸರ್ಕಾರಕ್ಕೆ ವರದಿ ಕೊಟ್ಟಿದ್ದರು. ಆದರೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಈವರೆಗೂ ಅದು ಈಡೇರಿಲ್ಲ’ ಎಂದು ದೂರಿದರು.

‘ಐದಾರು ತಾಲ್ಲೂಕು ಕೇಂದ್ರಗಳಿಗೆ ಕೇಂದ್ರಸ್ಥಳವಾಗಿ ಗೋಕಾಕ ನಗರವಿದ್ದು, 1.50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಹಾಗಾಗಿ ಗೋಕಾಕ ಜಿಲ್ಲಾಕೇಂದ್ರವಾಗಿ ಇದೇ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಅಶೋಕ ಪೂಜಾರಿ, ಇಮ್ರಾನ್‌ ತಪಕೀರ, ಶಬ್ಬೀರ್‌ ಮುಜಾವರ ನೇತೃತ್ವ ವಹಿಸಿದ್ದರು.

ಇದನ್ನೂ ನೋಡಿ : ವೇತನ ಹೆಚ್ಚಳಕ್ಕಾಗಿ ಬಿಸಿಯೂಟ ನೌಕರರ ಅನಿರ್ಧಿಷ್ಟ ಧರಣಿ | ಡಿಸೆಂಬರ್ 01-2025 Janashakthi Media

Donate Janashakthi Media