ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಸಾವಿರಾರು ರೈತ ಕಾರ್ಮಿಕರು ಭೂಮಿ, ಮನೆ ನಿವೇಶನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದರು. ರಾಜ್ಯ
ಇಂದು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಸರ್ಕಾರದ ಕಾರ್ಯದರ್ಶಿಗಳಾದ ಎಲ್.ಕೆ.ಅತಿಕ್ ರವರು ರೈತ ಕೂಲಿಕಾರರ ಮುಖಂಡರೊಂದಿಗೆ ಮಾತುಕತೆ ನಡೆಸಿ ಬೇಡಿಕೆಗಳ ಮನವಿ ಪತ್ರ ಸ್ವೀಕರಿಸಿ, ಆದಷ್ಟು ಬೇಗ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂಭಂದಿಸಿದ ಎಲ್ಲಾ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ಭಾರತದ ರೂಪಾಯಿ ಕುಸಿತ; ವಿವಿಧ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ
ನಂತರ ಸ್ವತಂತ್ರ ಉದ್ಯಾನವನದಲ್ಲಿ ಪ್ರತಿಭಟನಾಕಾರರು ಚರ್ಚಿಸಿ ಈ ಭರವಸೆಯನ್ನು ಖಾತ್ರಿಗೊಳಿಸುವ ನಿಟ್ಟಿನಲ್ಲಿ ಪ್ರಸಕ್ತ ಬಜೆಟ್ ಅಧಿವೇಶನದಲ್ಲಿ ರೈತ, ಕೂಲಿಕಾರರ ಗಂಭೀರ ಪ್ರಶ್ನೆಗಳನ್ನು ಶಾಸಕರುಗಳು ವಿಧಾನ ಸಭೆಯಲ್ಲಿ ಚರ್ಚಿಸಲು ಒತ್ತಡ ತರುವ ಉದ್ದೇಶದಿಂದ ಫೆಬ್ರವರಿ 24 ರಂದು ರಾಜ್ಯಾದ್ಯಂತ ಎಲ್ಲಾ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿ ಧರಣಿಯನ್ನು ಮುಕ್ತಾಯಗೊಳಿಸಿದರು.
ಸರ್ಕಾರದೊಂದಿಗೆ ಮಾತುಕತೆ ನಡೆಸಲು ತೆರಳಿದ್ದ ನಿಯೋಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಯು.ಬಸವರಾಜು, ಪ್ರಧಾನ ಕಾರ್ಯದರ್ಶಿ ಟಿ.ಯಶವಂತ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಪುಟ್ಟಮಾದು, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪಹೊಸ್ಕೆರಾ, ನೈಸ್ ಮತ್ತು ಬೆಂಗಳೂ ಪಿಪಿಆರ್ 2 ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಎನ್.ವೆಂಕಟಾಚಲಯ್ಯ, ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಮುಖಂಡರಾದ ಶ್ರೀನಿವಾಸ್ ಮತ್ತಿತರರು ಇದ್ದರು.
ಇದನ್ನೂ ನೋಡಿ: ಬೆಂಗಳೂರು ಏರ್ ಶೋ : ಉಕ್ಕಿನ ಹಕ್ಕಿಗಳ ಮ್ಯಾಜಿಕ್ #AeroShow2025 #AeroShowBengaluru Janashakthi Media