ಹುಬ್ಬಳ್ಳಿ: ಬೆಂಗಳೂರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಬೆಲೆ ಏರಿಕೆ ವಿಷಯವಾಗಿ ನಡೆದ ಜನಾಕ್ರೋಶ ಪ್ರತಿಭಟನೆ ಯಶಸ್ವಿಯಾಗಿದ್ದು, ಮೇ 2ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗಾರರ ಜತೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಹೇಳಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಈ ವಿಷಯದಲ್ಲಿ ಕೇಂದ್ರ ಸರಕಾರದ ಹಠ ಹೆಚ್ಚಾಗಿದೆ. ಈಗಾಗಲೇ ಮಹದಾಯಿ, ಕಳಸಾ-ಬಂಡೂರಿ ವಿಚಾರದಲ್ಲಿ ಈ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಜಯೋತ್ಸವ ಕಾರ್ಯಕ್ರಮಕ್ಕೆ ಕರೆಯುತ್ತೇವೆ ಎಂದಿದ್ದರು.
ಇದನ್ನೂ ಓದಿ: ಐಪಿಎಲ್: ಪ್ಲೇ ಆಫ್‌ಗೆ ಆರ್‌ಸಿಬಿ ತಂಡ ಹತ್ತಿರ; ಇನ್ನು ಎಷ್ಟು ಪಂದ್ಯ ಗೆಲ್ಲಬೇಕು?
ಇದುವರೆಗೆ ಏನೂ ಆಗಿಲ್ಲ. ಇನ್ನು ಮುಂದೆ ರಾಜಕಾರಣ ಮಾಡಬೇಡಿ. ರಾಜ್ಯಕ್ಕೆ ಸಹಾಯ ಆಗುವಂತಹ ಕೆಲಸ ಮಾಡಿ. ಜಿಪಂ-ತಾಪಂ ಚುನಾವಣೆ ಎದುರಿಸಲು ಪಕ್ಷ ಸನ್ನದ್ಧವಾಗಿದೆ ಎಂದು ಹೇಳಿದರು.
ಇದನ್ನೂ ನೋಡಿ: ಅಂಬೇಡ್ಕರ್ ಮತ್ತು ಕಾರ್ಮಿಕ ಕಾನೂನುಗಳು – ಅಶ್ವಿನಿ ಒಬುಳೇಶ್ Janashakthi Media