ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪಿಪಿಇ ಕಿಟ್‌ ಧರಿಸಿ ಪ್ರತಿಭಟನೆ

ಬೆಂಗಳೂರು: ಕೋವಿಡ್ 2ನೇ ಅಲೆಯಿಂದಾಗಿ ಹೆಚ್ಚುತ್ತಿರುವ ಸಾವು-ನೋವು ಮತ್ತು ಲಾಕ್‌ಡೌನ್‌ ಸಂಕಷ್ಟಗಳು, ಸರಕಾರದ ವೈಫಲ್ಯಗಳ ಹಿನ್ನೆಲೆಯಲ್ಲಿ  ಸಿಪಿಐ(ಎಂ), ಸಿಪಿಐ, ಎಸ್‌ಯುಸಿಐ(ಸಿ), ಸಿಪಿಐ(ಎಂಎಲ್‌) ಲಿಬರೇಷನ್‌, ಎಐಎಫ್‌ಬಿ, ಆರ್‌ಪಿಐ, ಸ್ವರಾಜ್‌ ಇಂಡಿಯಾ ಪಕ್ಷಗಳು ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯ ಅಂಗವಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೇಡಿಕೆಗಳ ಫಲಕಗಳನ್ನು ಪ್ರದರ್ಶಿಸುವ ಮೂಲಕ ಎಐಸಿಸಿಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದೇಶವ್ಯಾಪಿ ಎಲ್ಲರಿಗೂ ಉಚಿತವಾಗಿ ಕೋವಿಡ್‌ ಚಿಕಿತ್ಸೆ ಹಾಗೂ ಲಸಿಕೆ ನೀಡಬೇಕೆಂದು, ಪ್ರತಿಯೊಬ್ಬರಿಗೂ ರೂ.10,000 ಪರಿಹಾರಕ್ಕಾಗಿ, ನಗರ ಪ್ರದೇಶಕ್ಕೂ ಉದ್ಯೋಗ ಖಾತ್ರಿ ವಿಸ್ತರಣೆಗಾಗಿ, ಮುಂಚೂಣಿ ಯೋಧರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ವಿಶೇಷ ರಕ್ಷಣೆಯನ್ನು ಒದಗಿಸಲು ಆಗ್ರಹಿಸಲಾಯಿತು.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಜನತೆಯು ಹೊರಬರಲಾಗದ, ಪ್ರತಿಭಟಿಸಲಾಗದ ಸಂದರ್ಭವನ್ನು ಬಳಸಿ ರೈತ ವಿರೋಧಿ ಕೃಷಿ ಕಾಯ್ದೆಗಳು ಮತ್ತು ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಕೇಂದ್ರ-ರಾಜ್ಯ ಸರ್ಕಾರಗಳು ಅಂಗೀಕರಿಸಿವೆ. ರಾಜ್ಯ ಸರ್ಕಾರವು ತರಾತುರಿಯಲ್ಲಿ ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿಗಳನ್ನು ರೂಪಿಸಿ ಜಾರಿಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿದರು.

Donate Janashakthi Media

Leave a Reply

Your email address will not be published. Required fields are marked *