ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2022 ರಲ್ಲಿ ನಡೆದ ಪ್ರತಿಭಟನೆಯ ವೇಳೆ ರಸ್ತೆ ತಡೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಸಿಎಂ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿಶೇಷ ರಜೆ ಅರ್ಜಿಯು ಪ್ರಶ್ನಿಸಿದೆ.
ಅರ್ಜಿದಾರರಿಗೆ ತಲಾ 10,000 ರೂ.ಗಳನ್ನು ವಿಧಿಸಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠವು ಕಳೆದ ವಾರ ಸಿಎಂ ಸಿದ್ದರಾಮಯ್ಯ ಅವರು ಸಂಸದರು/ಶಾಸಕರ ವಿಶೇಷ ನ್ಯಾಯಾಲಯದ ಮುಂದೆ ಫೆಬ್ರವರಿ 26 ರಂದು ಹಾಜರಾಗುವಂತೆ ಆದೇಶಿಸಿತ್ತು. ಇದೇ ವೇಳೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಬೃಹತ್ ಮತ್ತು ಮಧ್ಯಮ ಸಚಿವ ಎಂ.ಬಿ. ಪಾಟೀಲ್ ಮಾರ್ಚ್ 11 ರಂದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾರ್ಚ್ 15 ರಂದು ಹ ಮಾರ್ಚ್ 7 ರಂದು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಹೈಕೋರ್ಟ್ ಹೇಳಿದೆ.
ಇದನ್ನೂ ಓದಿ: ‘ಇದು ಆರಂಭ ಮಾತ್ರ’ | ದೆಹಲಿ ರೈತ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ
ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಜನಪ್ರತಿನಿಧಿ ಎಂಬ ಕಾರಣಕ್ಕೆ ರಸ್ತೆ ತಡೆ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ. 2022ರ ಏಪ್ರಿಲ್ 14 ರಂದು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಅಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪಕ್ಷವು ಪ್ರತಿಭಟನೆಯನ್ನು ಆಯೋಜಿಸಿತ್ತು. ಪ್ರತಿಭಟನೆ ವೇಳೆ ಜನನಿಬಿಡ ರೇಸ್ ಕೋರ್ಸ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕಿಲೋಮೀಟರ್ ಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಲಾಗಿದೆ.
ರಸ್ತೆ ತಡೆ, ಟ್ರಾಫಿಕ್ ಜಾಮ್, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ವಿಶೇಷ ನ್ಯಾಯಾಲಯ ನೀಡಿದ ಎನ್‌ಬಿಡಬ್ಲ್ಯೂ ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಸಿಎಂ ಮತ್ತು ಇತರರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು.
ವಿಡಿಯೊ ನೋಡಿ:ರಾಮನಿಗೆ ಭವ್ಯ ಮಂದಿರ, ಶ್ರಮಿಕರಿಗೆ ಟೆಂಟ್ – ನಾಗೇಶ ಹೆಗಡೆ ವಿಶ್ಲೇಷಣೆ Janashakthi Media