ನಿಮಗೆ ಸ್ವಾತಂತ್ರ್ಯ ನೀಡುವೆ-ಕಠಿಣ ಕ್ರಮ ಕೈಗೊಳ್ಳಿ: ಪ್ರತಿಭಟನಾಕಾರರ ವಿರುದ್ಧ ಯೋಗಿ ಸರ್ಕಾರ

ಲಕ್ನೋ: ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಪ್ರತಿಕಾರ ತೀರಿಕೊಳ್ಳಲು ಮುಂದಾಗಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಪ್ರತಿಭಟನಾಕಾರರಿಗೆ ‘ಬುಲ್ಡೋಜರ್ ಕ್ರಮ’ದ ಎಚ್ಚರಿಕೆ ನೀಡಿದೆ.

ಬಿಜೆಪಿ ಪಕ್ಷದಿಂದ ಅಮಾನತುಗೊಂಡಿರುವ ನೂಪುರ ಶರ್ಮಾ ಹಾಗೂ ನವೀನ್‌ ಕುಮಾರ್‌ ಜಿಂದಾಲ್‌ ಪ್ರವಾದಿ ಮಹಮ್ಮದ್ ಪೈಗಂಬರ್ ಬಗೆಗೆ ನೀಡಿದ ಹೇಳಿಕೆ ವಿರೋಧಿಸಿ, ನೆನ್ನೆ (ಜೂನ್‌ 10) ಉತ್ತರ ಪ್ರದೇಶ(ಯುಪಿ) ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದುಕೊಂಡು ಸಾಕಷ್ಟು ಹಾನಿಯೂ ಸಂಭವಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಯೋಗಿ ಸರ್ಕಾರ ಬುಲ್ಡೋಜರ್‌ ಪ್ರಯೋಗಿಸಲು ಸಿದ್ಧಗೊಂಡಿದೆ.

ಇದನ್ನು ಓದಿ: ನೂಪುರ ಶರ್ಮಾ-ನವೀನ್‌ ಜಿಂದಾಲ್‌ ವಿರುದ್ಧ ಆಕ್ರೋಶಭರಿತ ಪ್ರತಿಭಟನೆ, ಕಲ್ಲು ತೂರಾಟ

ದೇಶದ ಒಟ್ಟಾರೆ 8 ರಾಜ್ಯಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ಹಾಗೂ ಹಿಂಸಾಚಾರಗಳು ನಡೆದವು. ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದ್ದು, ಕಾನ್ಪುರ್, ಪ್ರಯಾಗ್ ರಾಜ್, ಲಕ್ನೋ, ಮುರದಾಬಾದ್, ಸಹರಾನ್ಪುರ್, ಫಿರೋಜಾಬಾದ್‌ನಲ್ಲಿ ಜೋರಾಗಿ ನಡೆದಿದೆ. ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚುವ ಪ್ರಯತ್ನದಿಂದಾಗಿ 40ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಅಟಲ್ ಚೌಕ್ ಸುತ್ತಲಿನ ಪ್ರದೇಶಗಳಿಗೆ ಬುಲ್ಡೋಜರ್‌ಗಳು ಆಗಮಿಸಿ, ದುಷ್ಕರ್ಮಿಗಳನ್ನು ಪತ್ತೆಹಚ್ಚಿದ ಬಳಿಕ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಸಿದ್ಧಗೊಂಡಿದೆ. ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಇಸ್ಲಾಮಿಕ್ ಸಂಘಟನೆಯೊಂದು ಪರೇಡ್ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ಮುಚ್ಚಲು ಜೂನ್ 3 ರಂದು ಕರೆ ನೀಡಿದ ನಂತರ ಕಾನ್ಪುರದಲ್ಲಿ ಹಿಂಸಾತ್ಮಕ ಘರ್ಷಣೆಗಳು ಮತ್ತು ಕಲ್ಲು ತೂರಾಟಗಳು ನಡೆದವು.

ಕಾನ್ಪುರದಲ್ಲಿ  ನೆನ್ನೆ(ಜೂನ್‌ 10) ಬಹುತೇಕ ಶಾಂತಿ ನೆಲೆಸಿತ್ತು. ಅಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರಿಂದ ಗಲಾಟೆಗಳು ನಡೆದಿರಲಿಲ್ಲ. ಆದರೆ ಇತರ ನಗರಗಳಲ್ಲಿ, ಪೊಲೀಸರಿಗೆ ಅಂತಹ ಆತಂಕ ಇರಲಿಲ್ಲ, ಆದರೂ ಮುಸ್ಲಿಮರ ಘೋಷಣೆಗಳನ್ನು ಕೂಗಿದ್ದರಿಂದ ಗದ್ದಲ ಉಂಟಾಗಿತ್ತು. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಕ್ರಮಕ್ಕೆ ಮುಂದಾಗಿದೆ.

ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ (ಇಂದು) ಪ್ರತಿಭಟನಾಕಾರರಿಗೆ ಬುಲ್ಡೋಜರ್ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದು ಬುಲ್ಡೋಜರ್‌ ಫೋಟೋವನ್ನು ಹಾಕಿಕೊಂಡಿದ್ದಾರೆ.

ಇದನ್ನು ಓದಿ: ನೂಪುರ್‌, ಜಿಂದಾಲ್‌ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ: ಇಬ್ಬರು ಸಾವು

ಎಸಿಎಸ್ ಅವನೀಶ್ ಅವಸ್ತಿ, ಹಂಗಾಮಿ ಡಿಜಿಪಿ, ಎಡಿಜಿ ಕಾನೂನು ಮತ್ತು ಸುವ್ಯವಸ್ಥೆಯಂತಹ ಅಧಿಕಾರಿಗಳು ಪೊಲೀಸ್ ಪ್ರಧಾನ ಕಚೇರಿಯಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಎಲ್ಲ ಜಿಲ್ಲೆಗಳೂ ಕೂಡ ಈ ಕುರಿತಾದ ವರದಿ ನೀಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈತನ್ಮಧ್ಯೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದು, ನೆನ್ನೆ ರಾಜ್ಯದ ವಿವಿಧ ನಗರಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ‘ಸಮಾಜ ವಿರೋಧಿ’ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 230 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *