ಪ್ರಧಾನಿಯವರೆ ಹಾಲು ಕೊಡುವ ಕೆಚ್ಚಲನ್ನೇ ಕೊಯ್ಯಬೇಡಿ – ತೆರಿಗೆ ಹಂಚಿಕೆ ತಾರತಮ್ಯದ ವಿರುದ್ಧ ಕರ್ನಾಟಕ ಪ್ರತಿಭಟನೆ

ನವದೆಹಲಿ: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ‘ಅನ್ಯಾಯ’ದ ವಿರುದ್ಧ ರಾಷ್ಟ್ರರಾಜಧಾನಿಯ ಜಂತರ್ ಮಂತರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ. ಮುಖ್ಯಮಂತ್ರಿಯ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ರಾಜ್ಯದ ಕಾಂಗ್ರೆಸ್ ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಹಲವಾರು ಗಣ್ಯರು ಭಾಗಹಿಸಿದ್ದರು. ಕಳೆದ ಕೆಲವು ವರ್ಷಗಳಿಂದ ತೆರಿಗೆ ಹಂಚಿಕೆ ಮತ್ತು ಅನುದಾನದಲ್ಲಿ ಕರ್ನಾಟಕಕ್ಕೆ ‘ಅನ್ಯಾಯ’ವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, 15ನೇ ಹಣಕಾಸು ಆಯೋಗದ ಅಡಿಯಲ್ಲಿ ರಾಜ್ಯಕ್ಕೆ ಉಂಟಾಗಿದೆ ಎನ್ನಲಾದ 1.87 ಲಕ್ಷ ಕೋಟಿ ರೂ.ಗಳ ನಷ್ಟವನ್ನು ಕೇಂದ್ರ ಸರ್ಕಾರ ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರಧಾನಿ

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಈ ಪ್ರತಿಭಟನೆ ಬಿಜೆಪಿ ವಿರುದ್ಧ ಅಲ್ಲ, ಬದಲಾಗಿ ಕರ್ನಾಟಕದ ವಿರುದ್ಧ ನಡೆಯುತ್ತಿರುವ ತಾರತಮ್ಯದ ವಿರುದ್ಧ” ಎಂದು ಹೇಳಿದ್ದಾರೆ. ದೇಶವನ್ನು ಉತ್ತರ ಮತ್ತು ದಕ್ಷಿಣ ಎಂದು ವಿಭಜನೆ ಮಾಡುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ದೇಶವು ಒಗ್ಗೂಡಬೇಕೆಂದು ಬಯಸುತ್ತದೆ ಆದರೆ ದಕ್ಷಿಣದ ರಾಜ್ಯಗಳ ವಿರುದ್ಧ ಯಾವುದೇ ತಾರತಮ್ಯ ಮಾಡಬಾರದು ಎಂದು ಹೇಳಿದ್ದಾರೆ. ಪ್ರಧಾನಿ

ಇದನ್ನೂ ಓದಿ: ತೆಲಂಗಾಣ | ಹಾಲಿ ಬಿಆರ್‌ಎಸ್‌ ಸಂಸದ ಕಾಂಗ್ರೆಸ್ ಸೇರ್ಪಡೆ!

“14 ನೇ ಹಣಕಾಸು ಆಯೋಗದ ಅಡಿಯಲ್ಲಿ ರಾಜ್ಯಗಳಿಗೆ ಅದರಲ್ಲೂ ವಿಶೇಷವಾಗಿ ಕರ್ನಾಟಕಕ್ಕೆ ತೆರಿಗೆಯನ್ನು ವಿನಿಯೋಗಿಸಲು ಬಳಸುತ್ತಿದ್ದ ಸೂತ್ರವನ್ನು 15 ನೇ ಹಣಕಾಸು ಆಯೋಗವು ಬದಲಾಯಿಸಿದೆ. ಕರ್ನಾಟಕಕ್ಕೆ ಆದಾಯ ನಷ್ಟವನ್ನು ತಡೆಯಲು ಹಳೆಯ ಮಾದರಿಯನ್ನು ಅನುಸರಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ. 14ನೇ ಹಣಕಾಸು ಆಯೋಗವು ಬಳಸುವ ಸೂತ್ರವನ್ನು ಅಳವಡಿಸಿಕೊಳ್ಳಲು ಹೊಸ ಹಣಕಾಸು ಆಯೋಗಕ್ಕೂ ಪ್ರಾತಿನಿಧ್ಯವನ್ನು ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರುನಾಡು ಎಂದರೆ ಕಾಮಧೇನುವಿದ್ದ ಹಾಗೆ,
ಪ್ರಧಾನಿ ನರೇಂದ್ರ ಮೋದಿಯವರೆ, ಹಾಲು ಕೊಡುವ ಕೆಚ್ಚಲನ್ನೇ ಕೊಯ್ಯಬೇಡಿ ಎಂದು ಸರಣಿ ಟ್ವೀಟ್ ಮಾಡಿದ್ದಾರೆ. “ಕನ್ನಡಿಗರಿಗೂ ನ್ಯಾಯಯುತ ಪಾಲು ಮತ್ತು ಘನತೆಯ ಬದುಕು ಬೇಕು. ಕೇಂದ್ರದಿಂದ ನಡೆಯುತ್ತಿರುವ ಆರ್ಥಿಕ ದೌರ್ಜನ್ಯ ಇಲ್ಲಿಗೆ ಕೊನೆಯಾಗಬೇಕು” ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, “ನಮ್ಮ ರಾಜ್ಯದಲ್ಲಿ ಬರ ಆವರಿಸಿದೆ. ನಮ್ಮ ಕೃಷಿ ಸಚಿವರು, ಕಂದಾಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಬರದ ವಿಚಾರವಾಗಿ ವರದಿ ನೀಡಿದ್ದಾರೆ. ನಮ್ಮ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ಕೋರಿದ್ದಾರೆ. ಆದರೂ ಇದುವರೆಗೂ ನಯಾ ಪೈಸೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ. ನಮ್ಮ ಬಿಜೆಪಿ ಸ್ನೇಹಿತರಿಗೆ ನಾನು ಕೇಳುವುದಿಷ್ಟೇ. ಜನ ನಿಮ್ಮ ಪಕ್ಷದ 26 ಸಂಸದರನ್ನು ಆರಿಸಿದ್ದಾರೆ. ನೀವು ಒಂದು ದಿನ ರಾಜ್ಯದ ಪರವಾಗಿ ಹೋರಾಟ ಮಾಡಲಿಲ್ಲ. ರಾಜ್ಯದ ಹಿತದ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲಿಲ್ಲ. ಡಬಲ್ ಇಂಜಿನ್ ಸರ್ಕಾರದ ಇಂಜಿನ್ ಗಳು ಫೇಲ್ ಆದವು. ಮುಖ್ಯಮಂತ್ರಿಗಳು ನಿಮ್ಮನ್ನು ಕರೆದುಕೊಂಡು ಹೋದರೂ ಕೇಂದ್ರ ಸರ್ಕಾರದ ಮುಂದೆ ನೀವು ತುಟಿ ಬಿಚ್ಚಲಿಲ್ಲ. ಹೀಗಾಗಿ ಗಾಂಧಿ ಪ್ರತಿಮೆ ಮುಂದೆ ನಿಂತು ಪ್ರತಿಭಟನೆ ಮಾಡುವ ನೈತಿಕತೆ ನಿಮಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ | ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಸಾವು, 80 ಅಧಿಕ ಮಂದಿಗೆ ಗಾಯ

“ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಬರ ಆವರಿಸಿದೆ. ನಮ್ಮ ಕೃಷಿ ಸಚಿವರು, ಕಂದಾಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಬರದ ವಿಚಾರವಾಗಿ ವರದಿ ನೀಡಿದ್ದಾರೆ. ನಮ್ಮ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ಕೋರಿದ್ದಾರೆ. ಆದರೂ ಇದುವರೆಗೂ ನಯಾ ಪೈಸೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ” ಎಂದು ಡಿ,ಕೆ. ಶಿವಕುಮಾರ್ ಹೇಳಿದ್ದಾರೆ.

“ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ತಾರತಮ್ಯ, ಅನುದಾನ ಹಂಚಿಕೆಯಲ್ಲಿ ಮೋಸ, ನೀರಾವರಿ ಯೋಜನೆಗಳಿಗೆ ಅನುಮತಿ ನಿರಾಕರಣೆ, ವಿಶೇಷ ಅನುದಾನಕ್ಕೆ ಅಡ್ಡಗಾಲು ಹಾಕಿ ಕನ್ನಡಿಗರಿಗೆ ಮೇಲೆ ಸಾಲು ಸಾಲು ದ್ರೋಹ ಎಸಗಿದೆ. ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವ ಕೇಂದ್ರದ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದರು.

ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಫೆಬ್ರವರಿ 8ರ ಗುರುವಾರ ದಕ್ಷಿಣ ರಾಜ್ಯದ ಬಗ್ಗೆ ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ವಿಡಿಯೊ ನೋಡಿ: ನ್ಯಾಶನಲ್ ಕಾಲೇಜ್ ಮುಂದೆ ಜನಾಕ್ರೋಶ :ಡಾ. ರವಿ ಬಾಗಿ ವರ್ಗಾವಣೆ ಹಿಂಪಡೆದ ಆಡಳಿತ ಮಂಡಳಿ Janashakthi Media

Donate Janashakthi Media

Leave a Reply

Your email address will not be published. Required fields are marked *