ಪ್ರಾಣಿ ಕಡಿತದ ಪ್ರಕರಣಗಳು| ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆ ನೀಡಿ ಸರ್ಕಾರ ಆದೇಶ

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಹಾವು ಕಡಿತ, ನಾಯಿ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಸಂತ್ರಸ್ಥರಿಗೆ ಯಾವುದೇ ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆಯನ್ನು ನೀಡಬೇಕು ಎಂದು ನವೆಂಬರ್‌ 15ರಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇಂತಹ ತುರ್ತು ಪರಿಸ್ಥಿತಿಯಲ್ಲಿ, ಖಾಸಗಿ ವೈದ್ಯಕೀಯ ಸಂಸ್ಥೆಯು ಅಗತ್ಯ ಪ್ರಥಮ ಚಿಕಿತ್ಸೆಯನ್ನು ನೀಡಿ, ಜೀವ ಉಳಿಸಬೇಕು. ತುರ್ತು ಸಂದರ್ಭಗಳಲ್ಲಿ, ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆ ನೀಡಿದ್ದಲ್ಲಿ, ಚಿಕಿತ್ಸೆ ವೆಚ್ಚವನ್ನು ರಾಜ್ಯ ಸರಕಾರವು ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರದ ಮೂಲಕ ಪಾವತಿಸಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಎಲ್ಒಸಿ ಹೊರಡಿಸುವ ಅಧಿಕಾರ ಕೌಟುಂಬಿಕ ನ್ಯಾಯಾಲಯಕ್ಕೆ ಇಲ್ಲ: ಹೈಕೋರ್ಟ್

ಹಾವು ಕಡಿತ, ನಾಯಿ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆಗಳ ವಿರುದ್ದ ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗುತ್ತದೆ.

ಹಾಗೆಯೇ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106ರ ಪ್ರಕಾರ ಕಿಮಿನಲ್ ಮೊಕದ್ದಮೆಯನ್ನು ದಾಖಲಿಸಿಕೊಂಡು, ಎರಡು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಜೊತೆಗೆ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಇದನ್ನೂ ನೋಡಿ: CITU ರಾಜ್ಯ ಸಮ್ಮೇಳನ ಹಾಸನ | 36 ಸಾವಿರ ಕನಿಷ್ಠ ವೇತನಕ್ಕಾಗಿ, ಗುತ್ತಿಗೆ ಪದ್ದತಿ ಿರುದ್ಧ ಹೋರಾಟದ ನಿರ್ಣಯ

Donate Janashakthi Media

Leave a Reply

Your email address will not be published. Required fields are marked *