ಹಾಸನ : ಪ್ರಚೋದನಕಾರಿ ಭಾಷಣ ಮಾಡಿದ ಕಾರಣ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ತಾಲೋಕ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕಳೆದ ಜನವರಿ 9 ರಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಈ ಒಂದು ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ತಾಲೋಕ್ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಿ ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.ಪ್ರ
ಇದನ್ನೂ ಓದಿ : ನಿಲಂಬುರ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಪಿ.ವಿ.ಅನ್ವರ್
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಸಕಲೇಶಪುರದಲ್ಲಿ ಜನವರಿ 9ರಂದು ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಮುತಾಲಿಕ್ ವಿರುದ್ಧ ಪ್ರಚೋದನಕಾರಿ ಮಾತುಗಳನ್ನು ಆಡಿರುವ ಆರೋಪ ಕೇಳಿ ಬಂದಿತ್ತು.
ಸದ್ಯ ಸಕಲೇಶಪುರ ಠಾಣೆಗೆ ಪೊಲೀಸ್ ಸಿಬ್ಬಂದಿ ಎಂ ಕೆ ಶ್ರೀಧರ್ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ BNS 2023 U/S-196(1) 353(2) 3(5)ರ ಅಡಿ ಕೇಸ್ ದಾಖಲಾಗಿದೆ.
ಇದನ್ನೂ ನೋಡಿ : ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ, ಆರೆಸ್ಸೆಸ್ ಸಿದ್ಧಾಂತಕ್ಕೆ ಅವಕಾಶ ಕಲ್ಪಿಸುವ ಯುಜಿಸಿ ತಿದ್ದುಪಡಿಗಳು…