ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಾಗೂ ಸುಳ್ಳು ವಿಡಿಯೋ ದೃಶ್ಯವನ್ನು ಹರಡಿ ಜನತೆಗೆ ತಪ್ಪು ಸಂದೇಶ ನೀಡಿ ಕೋಮುಗಲಭೆ ಸೃಷ್ಟಿಸುತ್ತಿರುವ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ಹಾಗೂ ಬಿಜೆಪಿ ಪಕ್ಷದ ಅಂಗ ಸಂಸ್ಥೆಗಳು ಚುನಾವಣೆಯಲ್ಲಿ ಅಶಾಂತಿ ಸೃಷ್ಟಿಸಲು ಹಾಗೂ ಹಿಂದು ಮುಸ್ಲಿಮ್ ಎನ್ನುವ ಭೇದಭಾವ ಸೃಷ್ಟಿಸಲು ಸುಳ್ಳು ಗಲಭೆ ಹಾಗೂ ಪ್ರಚೋದನಕಾರಿ ದೃಶ್ಯಗಳನ್ನು ಹರಿ ಬಿಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಐದು ವರ್ಷಗಳಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಆಸ್ತಿಯಲ್ಲಿ ಸುಮಾರು 30% ಹೆಚ್ಚಳ
ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಂಡು ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಜಕೀಯ ಲಾಭಕ್ಕಾಗಿ ಪ್ರಯತ್ನಿಸುವ ಬಿಜೆಪಿ ಪಕ್ಷದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್.ಮನೋಹರ್ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.