ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಜುಲೈ 27 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ 3065 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. 202 ವಿಟ್ನೆಸ್ ಗಳು, 330 ದಾಖಲಾತಿಗಳು, 30 ಜನ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಎಡಿಜಿಪಿ ಅಮೃತ್ ಪೌಲ್ ಸೇರಿದಂತೆ ಕೆಲ ಆರೋಪಿಗಳನ್ನು ಬಿಟ್ಟು ಉಳಿದ ಅರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಮ್ರಿತ್ ಪೌಲ್ ಮೇಲೆ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲು ಸಾಕಷ್ಟು ಕಾಲವಾಕಾಶ ಇದೆ. ಹೀಗಾಗಿ ಹೆಚ್ಚಿನ ಮಾಹಿತಿಯನ್ನ ಸಿಐಡಿ ಕಲೆ ಹಾಕ್ತಿದೆ. ಸದ್ಯ ಸಂಪೂರ್ಣ ತನಿಖೆ ಮುಗಿದವರ ವಿರುದ್ಧ ಮಾತ್ರ ಈಗ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಎಫ್ಐಆರ್ ನಲ್ಲಿ ಹೆಸರಿದ್ದು, ಅರೆಸ್ಟ್ ಆಗದೆ ಇರುವ ಅರೋಪಿಗಳು ಹಾಗೂ ಕೊನೆ ಹಂತದಲ್ಲಿ ಅರೆಸ್ಟ್ ಅಗಿರುವ ಅರೋಪಿಗಳ ವಿರುದ್ದ ಚಾರ್ಜ್ ಶೀಟ್ ನಲ್ಲಿ ಸೇರಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಪಿಎಸ್‌ಐ ಅಕ್ರಮ: ಐಪಿಎಸ್ ಅಧಿಕಾರಿ ಅಮೃತ್ ಪೌಲ್ಗೆ 14 ದಿನ ನ್ಯಾಯಾಂಗ ಬಂಧನ
ಕರ್ನಾಟಕದಲ್ಲಿ ಪಿಎಸ್ಐ ನೇಮಕಾತಿ ಹಗರಣ ಭಾರಿ ಸದ್ದು ಮಾಡಿತ್ತು. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಸಹ ಹಗರಣದಲ್ಲಿ ಸಿಲುಕಿದ್ದರು. ಕೋಟಿ ಕೋಟಿ ಹಣವನ್ನು ಪಡೆದು ಪಿಎಸ್ಐ ಹುದ್ದೆಯನ್ನು ಬಿಗರಿ ಮಾಡಿದಂತೆ ಪರೀಕ್ಷೆಯಲ್ಲಿ ಅಕ್ರಮವನ್ನು ಎಸಗಲಾಗಿತ್ತು. ನೇಮಕಾತಿ ವಿಭಾಗದ ಕಚೇರಿಯಲ್ಲಿಯೇ ಉತ್ತರದ ಹಾಳೇಗಳನ್ನು ತಿದ್ದುವ ಕೆಲಸವನ್ನು ಮಾಡಿದ್ದರು. ಹೊಸ ಹೊಸ ವಿಧಾನಗಳನ್ನು ಬಳಸಿದ್ದರು. ಬ್ಲೂಟೂತ್ ಸೇರಿದಂತೆ ಹೊಸ ವಿಧಾನವನ್ನು ಬಳಕೆಯನ್ನು ಮಾಡಿ ನಕಲನ್ನು ಮಾಡಿ ಪರೀಕ್ಷೆಯನ್ನು ಉತ್ತಮ ಅಂಕವನ್ನು ಗಳಿಸಿ ಆಯ್ಕೆ ಆಗವ ಹಂತದಲ್ಲಿದ್ದರು. ಅಕ್ರಮದಲ್ಲಿ ಶಾಮೀಲು ಆಗಿದ್ದವರ ಹೆಡೆಮುರಿಯನ್ನು ಕಟ್ಟಲಾಗಿದೆ. ಇದೀಗ ಇವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಪರೀಕ್ಷೆ ರದ್ದು ಮಾಡುವುದು ಬೇಡವೆಂದಿದ್ದ ಅಭ್ಯರ್ಥಿಗಳ ಅರ್ಜಿ ವಜಾ: ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ. ಪಿಎಸ್ಐ ಅಭ್ಯರ್ಥಿಗಳು ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ತನಿಖೆ ಮೂಲಕ ಕಳಂಕಿತರನ್ನು ಪ್ರತ್ಯೇಕಿಸಲು ಮನವಿ ಮಾಡಿದ್ದರು. ಆದ್ರೆ ಈಗ ಕಾರಣಕೊಟ್ಟು ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ.