- ಪಿಎಸ್ ಐ ಹಗರಣಕ್ಕೆ ಅಧಿಕಾರಿಗಳಷ್ಟೇ ಹೊಣೆಯಲ್ಲ
- ಗೃಹ ಮಂತ್ರಿ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕಬೇಕು
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾಗಿಯಾಗಿದ್ದು, ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ ಎಂದಿದ್ದಾರೆ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
https://twitter.com/siddaramaiah/status/1543914503900844032?ref_src=twsrc%5Etfw%7Ctwcamp%5Etweetembed%7Ctwterm%5E1543914503900844032%7Ctwgr%5E%7Ctwcon%5Es1_c10&ref_url=https%3A%2F%2Fwww.etvbharat.com%2Fkannada%2Fkarnataka%2Fcity%2Fbengaluru%2Fformer-cm-siddaramaih-criticizes-home-minister%2Fka20220705085152194194418
PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಾಳೆಹಣ್ಣು ಸಿಕ್ತು ಅಂತಾ ತಿಂದವರನ್ನು ಹಿಡಿದಿದ್ದೀರಿ. ಬಾಳೆಗಿಡ ನೆಟ್ಟವರನ್ನು ಬಿಟ್ಟಿದ್ದೀರಿ. ಸಿಐಡಿ ಬಗ್ಗೆ ಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಕೆಲ ಹಿರಿಯ ಅಧಿಕಾರಿಗಳು ಹಾಜರಾಗಿ ವರದಿ ಸಲ್ಲಿಸುವಂತೆ ಸೂಚಿಸಿದೆ.ಕೇವಲ ಪಿಎಸ್ಐ ಅಕ್ರಮ ನೇಮಕಾತಿ ಮಾತ್ರವಲ್ಲ. ಎಲ್ಲಾ ಇಲಾಖೆಯಲ್ಲಿಯೂ ಅಕ್ರಮ ಆಗಿದೆ ಎಂದು ಆರೋಪಿಸಿದರು.