ಪಿಎಸ್‌ಐ ಅಕ್ರಮ ನೇಮಕಾತಿ : ಎಡಿಜಿಪಿ ಅಮೃತ್ ಪೌಲ್‌ ವಿರುದ್ದ ಚಾರ್ಜ್ ಶೀಟ್!

ಬೆಂಗಳೂರು : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್‌ ಪೌಲ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಅಮೃತ್‌ ಪೌಲ್‌ ಅವರನ್ನು ಈ ತಿಂಗಳ ಆರಂಭದಲ್ಲಿ 8 ದಿನಗಳ ಕಾಲ ಸಿಐಡಿ ಪೊಲೀಸರು ಕಸ್ಡಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಈ ಎಲ್ಲಾ ವಿಚಾರಣೆಯ ಬಳಿಕ ಸಿಬಿಐ ಹೆಚ್ಚುವರಿ ಚಾರ್ಜ್‌ಶೀಟ್‌ಅನ್ನು ಬುಧವಾರ ಸಲ್ಲಿಕೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಮೃತ್‌ ಪೌಲ್‌ ಅವರನ್ನು ಕಸ್ಟಡಿಗೆ ನೀಡಿದ್ದ ಎಸಿಎಂಎಂ ಕೋರ್ಟ್‌ಗೆ ಸಿಬಿಐ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಒಟ್ಟು 1406 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಇದಾಗಿದ್ದು, 78 ದಾಖಲೆಗಳು 38 ಸಾಕ್ಷಿಗಳ ಉಲ್ಲೇಖ ಮಾಡಲಾಗಿದೆ. 1 ನೇ ಎಸಿಎಂಎಂ ಕೋರ್ಟ್‌ಗೆ ಸಿಐಡಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ಅವರಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪ್ರಕರಣದಲ್ಲಿ ಅಮೃತ್‌ ಪೌಲ್‌ ಅವರನ್ನು ಏಳನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಲಕ್ಷಾಂತರ ರೂಪಾಯಿ ಪಡೆದು ಅಕ್ರಮ ಎಸಗಿರುವ ಸಾಧ್ಯತೆ ಬಹಳವಾಗಿ ಎದ್ದು ಕಂಡಿದೆ. ಪೌಲ್‌ ಅವರು ಕೃತ್ಯ ಎಸಗಲು ಬಳಸಿರಬಹುದಾದ ಮೊಬೈಲ್‌, ಸಿಮ್‌ ಕಾರ್ಡ್‌ಗಳು ಹಾಗೂ ಅವರು ಹೊಂದಿರುವ ಬ್ಯಾಂಕ್‌ ಖಾತೆಗಳ ವಿವರಗಳನ್ನು ಕಲೆಹಾಕಿ, ಹಣದ ವರ್ಗಾವಣೆಯ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್‌ನಲ್ಲಿ ಹಾಕಲಾಗಿದೆ ಎನ್ನುವ ಮಾಹಿತಿ ಇದೆ.

ಇದನ್ನೂ ಓದಿ : ಪಿಎಸ್‌ಐ ಅಕ್ರಮ; ಅಮೃತ್‌ ಪೌಲ್‌ ಗೆ ರೂ.5 ಕೋಟಿ-ಸಿಐಡಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ

ಏನಿದು ಪ್ರಕರಣ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಏಳನೇ ಆರೋಪಿಯಾಗಿ ಅಮೃತ್‌ ಪೌಲ್‌ ಅವರನ್ನು ಹೆಸರಿಸಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ  ಇದೇ ಪ್ರಕಣದ ಕುರಿತು ದಾಖಲಾಗಿರುವ ಎಫ್‌ಐಆರ್‌ಗೆ ಕುರಿತು 2022ರ ಜು.4ರಂದು ಬಂಧಿತರಾಗಿದ್ದ ಪೌಲ್‌ ಅವರು ಜು.14ರವರೆಗೆ ಪೊಲೀಸ್‌ ಬಂಧನದಲ್ಲಿದ್ದರು. ಆ ನಂತರವೇ ಅವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ಸಂಪೂರ್ಣ ಪ್ರಕಣದಲ್ಲಿ 34ನೇ ಆರೋಪಿಯಾಗಿರುವ ಪೌಲ್‌ ಅವರ ಜಾಮೀನು ಅರ್ಜಿಗಳನ್ನು  1ನೇ ಎಸಿಎಂಎಂ ನ್ಯಾಯಾಲಯ  ಹಾಗೂ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿವೆ.

Donate Janashakthi Media

Leave a Reply

Your email address will not be published. Required fields are marked *