ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು (ಶನಿವಾರ) ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.
ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್‌ಸೈಟ್ http://www.karresults.nic.in ನಲ್ಲಿ ಪ್ರಕಟವಾಗಲಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ಪಿಯುಸಿ ಫಲಿತಾಂಶವನ್ನೂ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.
ಏಪ್ರಿಲ್ 22ರಿಂದ ಮೇ 18 ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಈ ಪೈಕಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು-61,808 ಖಾಸಗಿ ವಿದ್ಯಾರ್ಥಿಗಳು 21,928 ಇದ್ದರು.
ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗದಲ್ಲಿ 2,28,167, ವಾಣಿಜ್ಯ ವಿಭಾಗದಲ್ಲಿ 2,45,519, ವಿಜ್ಞಾನ ವಿಭಾಗದಲ್ಲಿ 2,10,569 ಜನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶ ನೋಡೋದು ಹೇಗೆ
1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
2. ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
3. ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬಹುದು.