ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ| ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಚೀನಾದಲ್ಲಿ

ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ ನಂತರ ರಾಜ್ಯ ಆರೋಗ್ಯ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಮೊದಲ ಝೀಕಾ ವೈರಲ್ ಸೋಂಕು ಪತ್ತೆ : ಏನಿದು ಝೀಕಾ ವೈರಸ್‌?

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

ಇದು ಸಾಮಾನ್ಯ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಕಡಿಮೆ ತೀವ್ರತೆ ಹೊಂದಿದ. ಇದು ಸಾಮಾನ್ಯವಾಗಿ ಐದರಿಂದ ಏಳು ದಿನಗಳವರೆಗೆ ಇರುತ್ತದೆ. ಆದಾಗ್ಯೂ, ಇದು ಮಕ್ಕಳಿಗೆ, ವೃದ್ಧರಿಗೆ, ಗರ್ಭಿಣಿಯರಿಗೆ, ಇಮ್ಯುನೊಕೊಂಪ್ರೊಮೈಸ್ಡ್ ಮತ್ತು ದೀರ್ಘಕಾಲೀನ ಔಷಧಿಗಳಾದ ಸ್ಟೆರಾಯ್ಡ್‌ಗಳನ್ನು ತೆಗೆದುಕೊಳ್ಳುವವರಿಗೆ ಹೆಚ್ಚಿನ ಅಪಾಯವನ್ನುಂಟುಮಾಡುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ರೋಗದ ಲಕ್ಷಣಗಳು:

ಜ್ವರ, ಶೀತ, ಅಸ್ವಸ್ಥತೆ, ಹಸಿವಿನ ಕೊರತೆ, ವಾಕರಿಕೆ, ಸೀನುವಿಕೆ ಮತ್ತು ಒಣ ಕೆಮ್ಮು ಈ ರೋಗದ ಲಕ್ಷಣಗಳಾಗಿವೆ. ಹೀಗಾಗಿ ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು.

ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳಬೇಕು. ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸಬೇಕು. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು ಉತ್ತಮ.  ಫ್ಲೂ ಪೀಡಿತ ವ್ಯಕ್ತಿಗಳಿಂದ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಲಾಗಿದೆ.

ವಿಡಿಯೋ ನೋಡಿ:ದುಡಿಯುವ ಜನರ ಮಹಾಧರಣಿ – ಸಾಂಸ್ಕೃತಿಕ ಕಾರ್ಯಕ್ರಮ

Donate Janashakthi Media

Leave a Reply

Your email address will not be published. Required fields are marked *