ಮಾರ್ಚ್ 1ರಿಂದ ಪಿಯುಸಿ, 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ | ಹೊಸ ಮಾದರಿಯಲ್ಲಿ ಪರೀಕ್ಷೆ!

ಬೆಂಗಳೂರು: ಮಾರ್ಚ್ 1 ರಂದು ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6,98,624 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಮಂಗಳವಾರ ಪ್ರಕಟಿಸಿದ್ದಾರೆ. ಅದೇ ರೀತಿ ಮಾರ್ಚ್ 25 ಮತ್ತು ಏಪ್ರಿಲ್ 6ರ ನಡುವೆ 8,96,271 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಂಗಾರಪ್ಪ, ಪರೀಕ್ಷೆಗಳನ್ನು ‘ವಿದ್ಯಾರ್ಥಿ ಸ್ನೇಹಿ’ಯನ್ನಾಗಿ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ಫಲಿತಾಂಶವು ತುಲನಾತ್ಮಕವಾಗಿ ಉತ್ತಮವಾಗಿರುತ್ತದೆ ಎಂದು ಇಲಾಖೆ ವಿಶ್ವಾಸ ಹೊಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕರು ಪಕ್ಷ ತೊರೆಯಲು ಮುಂದಾಗಿದ್ದಕ್ಕೆ ಬಿಜೆಪಿ ಜತೆ ಮೈತ್ರಿ ಮಾಡಿದ ದೇವೇಗೌಡ – ಸಿದ್ದರಾಮಯ್ಯ ಆರೋಪ

ಕಳೆದ ವರ್ಷ ಸರ್ಕಾರವು ಪೂರಕ ಪರೀಕ್ಷೆಗಳನ್ನು ರದ್ದುಗೊಳಿಸಿದ್ದು, SSLC ಮತ್ತು ದ್ವಿತೀಯ PUC ಗಾಗಿ ಮೂರು ಬೋರ್ಡ್ ಪರೀಕ್ಷೆಗಳನ್ನು ಪರಿಚಯಿಸಿದೆ. ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪಿಯು ಪರೀಕ್ಷೆಗಾಗಿ 1,124 ಕೇಂದ್ರಗಳನ್ನು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 2,747 ಕೇಂದ್ರಗಳನ್ನು ಗುರುತಿಸಿದೆ.

“ಅಪರಾಧವನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ದುಷ್ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಹುತೇಕ ಎಲ್ಲಾ ಕೇಂದ್ರಗಳು ಪರೀಕ್ಷಾ ಕೊಠಡಿಗಳ ಒಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿವೆ” ಎಂದು ಸಚಿವರು ಹೇಳಿದ್ದಾರೆ.

ಪ್ರಥಮ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗುವಂತೆ ಒತ್ತಾಯಿಸಿ ಮಾತನಾಡಿದ ಬಂಗಾರಪ್ಪ, “ವಿದ್ಯಾರ್ಥಿಗಳು ಸಮ್ಮೇಟಿವ್ ಎಕ್ಸಾಮ್-1 ಕ್ಕೆ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ಇದಕ್ಕೆ ಹಾಜರಾದರೆ ಪರೀಕ್ಷೆ 2 ಮತ್ತು 3ಕ್ಕೆ ಹಾಜರಾಗಲು ಅರ್ಹತೆ ಪಡೆಯಬಹುದು. ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ನಮ್ಮ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ | ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ ಬಿಜೆಪಿ

“ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಒಟ್ಟಾರೆ ಕಾರ್ಯಕ್ಷಮತೆಯನ್ನು ಸುಧಾರಿಸಲು ಈ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಯಾವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುತ್ತಾರೆಯೊ ಅವುಗಳನ್ನು ಅಂತಿಮ ಫಲಿತಾಂಶಗಳಿಗಾಗಿ ಪರಿಗಣಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಮೊದಲ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ, ವಿಪರೀತ ಸಂದರ್ಭಗಳಲ್ಲಿ ಮಾತ್ರ ಬೇರೆ ಬೇರೆ ಆದಾರದಲ್ಲಿ ಎರಡನೇ ಅವಕಾಶವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಮಂಡಳಿಯು 80+20 ಮಾದರಿ ಪರೀಕ್ಷೆಯನ್ನು ಅಳವಡಿಸಿಕೊಂಡಿದೆ. ಲಿಖಿತ ಪರೀಕ್ಷೆಗೆ 80 ಅಂಕಗಳನ್ನು ಮತ್ತು ಆಂತರಿಕ ಮೌಲ್ಯಮಾಪನಕ್ಕೆ 20 ಅಂಕಗಳನ್ನು ನಿಗದಿಪಡಿಸಲಾಗಿದೆ. SSLC ಪರೀಕ್ಷೆಗಳಿಗೆ ಖಾಸಗಿ ಅಭ್ಯರ್ಥಿಗಳಿಗೂ ಅದೇ ಪತ್ರಿಕೆಯನ್ನು ನೀಡಲಾಗುವುದು ಮತ್ತು ಫಲಿತಾಂಶಗಳನ್ನು ಪ್ರಕಟಿಸುವ ಮೊದಲು ಅವರ ಅಂಕಗಳನ್ನು 100 ಅಂಕಗಳಿಗೆ ಹೆಚ್ಚಿಸಲಾಗುತ್ತದೆ.

ಶಾಲೆಗಳಲ್ಲಿ ರಾಗಿ ಮಾಲ್ಟ್

ಫೆಬ್ರವರಿ 22ರಂದು ಮಧ್ಯಾಹ್ನದ ಊಟದ ಯೋಜನೆಯಲ್ಲಿ ‘ರಾಗಿ ಮಾಲ್ಟ್’ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಮಧು ಬಂಗಾರಪ್ಪ ಮಂಗಳವಾರ ಪ್ರಕಟಿಸಿದ್ದಾರೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ಬಾರಿ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಮೂಲಕ ಮಾಲ್ಟ್ ಸಿಗಲಿದೆ. ಇನ್ನೆರಡು ದಿನಗಳ ಕಾಲ ಮೊಟ್ಟೆ/ಚಿಕ್ಕಿ ನೀಡಲಾಗುತ್ತದೆ.

ವಿಡಿಯೊ ನೋಡಿ: ಸೆಕ್ಯೂಲರಿಸಂ ಹಾಗೂ ಸೊಶಿಯಲಿಸಂ ಬೆಸದಾಗ ಮಾತ್ರ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ – ಡಾ. ಪ್ರಕಾಶ್

Donate Janashakthi Media

Leave a Reply

Your email address will not be published. Required fields are marked *