ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ದತ್ತಾತ್ರೇಯ ರಾಮದಾಸ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ಫೀಡ್ ಮೂಲಕ ಆತನನ್ನು ಗುರುತಿಸಲಾಗಿದೆ. ಆದರೆ ಆತನನ್ನು ಇನ್ನೂ ಬಂಧಿಸಿಲ್ಲ. ಪೊಲೀಸ್ ಠಾಣೆಗೆ ಸ್ವಲ್ಪ ದೂರದಲ್ಲೇ ಅತ್ಯಾಚಾರ ನಡೆದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳು ಆ ಪೊಲೀಸ್ ಠಾಣೆಯ 23 ಭದ್ರತಾ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.
ಇದನ್ನು ಓದಿ :-USAID ನಿರ್ನಾಮಕ್ಕೆ ಟ್ರಂಪ್-ಮಸ್ಕ್ ಮಹತ್ವದ ಕ್ರಮ: ಅರ್ಧದಷ್ಟು ನೌಕರರಿಗೆ ರಜೆ, 1,600 ಮಂದಿ ವಜಾ
ಫೆಬ್ರವರಿ 26 ಮಂಗಳವಾರ ಮುಂಜಾನೆ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮತ್ತು ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಈ ಘಟನೆ ಇದೀಗ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ನಂತರ ಆರೋಪಿಗಾಗಿ ವ್ಯಾಪಕ ಹುಡುಕಾಟ ನಡೆಯುತ್ತಿದೆ. ದತ್ತಾತ್ರೇಯ ರಾಮದಾಸ್ ಎಂದು ಗುರುತಿಸಲಾದ ಆರೋಪಿಯ ವಿರುದ್ಧ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.