ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ನುಗ್ಗಿ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿಯನ್ನು ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟು ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ಪೊಲೀಸರು ಜನವರಿ 16ರ ತಡರಾತ್ರಿ ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಂಧನ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ನವದೆಹಲಿ | ಎಸ್‌ಐಆರ್ 2ನೇ ಹಂತದ ಪ್ರಕ್ರಿಯೆ: ಆಕ್ಷೇಷಣಾ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಆತನ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಇದನ್ನೂ ನೋಡಿ: ವಲಸೆ ಕಾರ್ಮಿಕರ ಮನೆಗೆ ನುಗ್ಗಿ ಆಧಾರ್‌ ಪರಿಶೀಲಿಸಲು ಪುನೀತ್‌ ಕೆರೆಹಳ್ಳಿ ಯಾರು? Janashakthi Media

Donate Janashakthi Media

Leave a Reply

Your email address will not be published. Required fields are marked *